ಅಹ್ಮದಾಬಾದ್: 2016 ರ ಗಲಭೆ ಮತ್ತು ಕಾನೂನುಬಾಹಿರ ಸಭೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮತ್ತು ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ 18 ಮಂದಿಗೆ ಅಹಮದಾಬಾದ್ನ ನ್ಯಾಯಾಲಯವು ಇಂದು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಮೇವಾನಿ ಅವರು ದಲಿತ ಹಕ್ಕುಗಳ ಗುಂಪು, ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ನ ಇತರ ಸದಸ್ಯರೊಂದಿಗೆ 2016 ರಲ್ಲಿ ಗುಜರಾತ್ ವಿಶ್ವವಿದ್ಯಾಲಯದ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಇಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 20 ಮಂದಿಯನ್ನು ಬಂಧಿಸಲಾಗಿತ್ತು. ಒಬ್ಬ ಆರೋಪಿ ಮೃತಪಟ್ಟರೆ ಉಳಿದವರಿಗೆ ಇಂದು ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.