ಬೆಂಗಳೂರು: ಕರ್ನಾಟಕ ಪ್ರವಾಸದಲ್ಲಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ವರದಿಗಳ ಪ್ರಕಾರ, ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿನ ಮಹತ್ವದ ರೈಲ್ವೆ ಯೋಜನೆಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಕೇರಳ ಸಿಎಂ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲು ಹೊದಿಸಿ, ಮೈಸೂರು ತೊಡಿಸಿ ಸ್ವಾಗತಿಸಿದ್ದಾರೆ.
ತಲಶ್ಶೇರಿ–ಮೈಸೂರು ಹಾಗೂ ನಿಲಂಬೂರು–ನಂಜನಗೂಡು ರೈಲ್ವೆ ಯೋಜನೆಯ ಅನುಷ್ಠಾನದ ಕುರಿತು ಉಭಯ ನಾಯಕರಿಂದ ಚರ್ಚೆ ನಡೆದಿದೆ. ತಿರುವನಂತಪುರ–ಕಾಸರಗೋಡು ಸೆಮಿ ಹೈ–ಸ್ಪೀಡ್ ರೈಲು ಮಾರ್ಗ ಹಾಗೂ ಸಿಲ್ವರ್ ಮಾರ್ಗವನ್ನು ಮಂಗಳೂರಿನವರೆಗೂ ವಿಸ್ತರಿಸುವ ಸಂಬಂಧ ಕೇರಳ ಸರ್ಕಾರದ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಈ ಸಂಬಂಧ ಚರ್ಚೆ ನಡೆದಿದೆ ಎನ್ನಲಾಗಿದೆ.
Had a fruitful meeting with Shri @pinarayivijayan, the Chief Minister of Kerala. Various issues of inter state and mutual interest were discussed. pic.twitter.com/NsbIxXHscQ
— Basavaraj S Bommai (@BSBommai) September 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.