ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮೊದಲು ಕೇಂದ್ರವು ಹೊಸ ರಾಷ್ಟ್ರೀಯ ಪ್ರವಾಸೋದ್ಯಮ ನೀತಿಯನ್ನು ಹೊರತರಲಿದೆ.
ನಿನ್ನೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ರಾಜ್ಯ ಪ್ರವಾಸೋದ್ಯಮ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಅವರು ಈ ಮಾಹಿತಿ ನೀಡಿದ್ದಾರೆ.
ಪಾಲುದಾರರೊಂದಿಗೆ ವ್ಯಾಪಕ ಸಮಾಲೋಚನೆ ಮತ್ತು ಚರ್ಚೆಯ ನಂತರ ರಾಷ್ಟ್ರೀಯ ಪ್ರವಾಸೋದ್ಯಮ ನೀತಿಯನ್ನು ತರಲಾಗುವುದು ಎಂದು ಅವರು ಹೇಳಿದ್ದಾರೆ.
ಭಾರತದ ಜಿ 20 ಅಧ್ಯಕ್ಷ ಸ್ಥಾನದ ಸಂದರ್ಭದಲ್ಲಿ ರಾಜ್ಯ ಪ್ರವಾಸೋದ್ಯಮ ಮಂತ್ರಿಗಳ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿರುವುದು ಬಹು ಮುಖ್ಯವಾಗಿದೆ ಎಂದು ರೆಡ್ಡಿ ಹೇಳಿದರು.
ಭಾರತದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಜಗತ್ತಿಗೆ ಪ್ರದರ್ಶಿಸಲು ಜಿ-20 ಅನ್ನು ವೇದಿಕೆಯಾಗಿ ಬಳಸಿಕೊಳ್ಳಲಾಗುವುದು. ವಿವಿಧ ಪ್ರವಾಸಿ ಸರ್ಕ್ಯೂಟ್ಗಳಿಗೆ ಉತ್ತೇಜನ ನೀಡಲಾಗುತ್ತಿದ್ದು, ಶೀಘ್ರದಲ್ಲಿಯೇ ಹೊಸ ‘ಅಂಬೇಡ್ಕರ್ ಸರ್ಕ್ಯೂಟ್’ ಆರಂಭಿಸಲಾಗುವುದು ಎಂದು ತಿಳಿಸಿದರು. ಪ್ರವಾಸಿ ಸರ್ಕ್ಯೂಟ್ಗಳ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆಯಡಿ ಹಿಮಾಲಯನ್ ಸರ್ಕ್ಯೂಟ್ ಅನ್ನು ಉತ್ತೇಜಿಸಲಾಗುವುದು ಎಂದು ಸಚಿವರು ಹೇಳಿದರು.
ವೈಮಾನಿಕ ಸಂಪರ್ಕದ ಮಹತ್ವವನ್ನು ಒತ್ತಿ ಹೇಳಿದ ಕಿಶನ್ ರೆಡ್ಡಿ, 2014 ರಲ್ಲಿ ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 74 ರಿಂದ ಪ್ರಸ್ತುತ 140 ಕ್ಕೆ ಏರಿದೆ ಎಂದು ಹೇಳಿದರು.
ರಾಜ್ಯ ಪ್ರವಾಸೋದ್ಯಮ ಸಚಿವರ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಿನ್ನೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಪ್ರಾರಂಭವಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.