ಟೆಹ್ರಾನ್: 22 ವರ್ಷದ ಮಹಿಳೆ ಮಹ್ಸಾ ಅಮಿನಿ ಸಾವಿನ ನಂತರ ಇರಾನ್ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಮಹಿಳೆಯರು ಸಾರ್ವಜನಿಕವಾಗಿ ತಮ್ಮ ಹಿಜಾಬ್ಗಳನ್ನು ತೆಗೆದು ಸುಟ್ಟು ಹಾಕುತ್ತಿದ್ದಾರೆ. ಕೆಲವರು ಹಿಜಾಬ್ ತೆಗೆದು ಬಿಸಾಕುತ್ತಿದ್ದಾರೆ
ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಅಮಿನಿ ಅವರನ್ನು ಪೊಲೀಸರು ಥಳಿಸಿ ಕೊಲೆ ಮಾಡಿದ್ದಾರೆ. ರಾಯಿಟರ್ಸ್ ವರದಿಯ ಪ್ರಕಾರ, ಕಳೆದ ವಾರ ಟೆಹ್ರಾನ್ನಲ್ಲಿ ಆಕೆಯನ್ನು ಬಂಧಿಸಿದ ನಂತರ ಚಿತ್ರಹಿಂಸೆ ನೀಡಲಾಗಿದೆ. ಇದರಿಂದಾಗಿ ಕೋಮಾಗೆ ಜಾರಿದ್ದ ಆಕೆ ಶುಕ್ರವಾರ ನಿಧನರಾಗಿದ್ದಾರೆ. ಈ ಘಟನೆ ಇರಾನ್ ಮಹಿಳೆಯರ ಆಕ್ರೋಶ ಭುಗಿಲೇಳುವಂತೆ ಮಾಡಿದೆ. ಸಾರ್ವಜನಿಕವಾಗಿ ಹಿಜಾಬ್ ತೆಗೆದು ಬಿಸಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಲವಾರು ಪ್ರತಿಭಟನೆಗಳ ವೀಡಿಯೊಗಳು ವೈರಲ್ ಆಗಿವೆ. ಕೆಲವು ವೀಡಿಯೊಗಳಲ್ಲಿ, ಪ್ರತಿಭಟನಾಕಾರರನ್ನು ಚದುರಿಸಲು ಇರಾನ್ ಪಡೆಗಳು ಅಶ್ರುವಾಯು ಬಳಸುತ್ತಿರುವುದನ್ನು ಕಾಣಬಹುದು.
ಏಳು ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಹಿಜಾಬ್ ಅನ್ನು ಧರಿಸಬೇಕೆಂಬ ಇರಾನಿನ ನಿಯಮಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಮಹಿಳೆಯರು ಸಾಂಕೇತಿಕವಾಗಿ ತಮ್ಮ ಕೂದಲನ್ನು ಕತ್ತರಿಸಿ ತಮ್ಮ ಹಿಜಾಬ್ಗಳನ್ನು ಸುಟ್ಟುಹಾಕುತ್ತಿದ್ದಾರೆ.
ಮಹಿಳಾ ಹಕ್ಕು ಸಂಘಟನೆಗಳು ಇರಾನ್ ಮಹಿಳೆಯರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸುತ್ತಿದ್ದಾರೆ.
https://twitter.com/AlinejadMasih/status/1571479790883946500?ref_src=twsrc%5Etfw%7Ctwcamp%5Etweetembed%7Ctwterm%5E1571479790883946500%7Ctwgr%5E6c86a96728a419f8d5957fdaf8de415ec5e8e8bc%7Ctwcon%5Es1_&ref_url=https%3A%2F%2Fwww.ndtv.com%2Fworld-news%2Fmahsa-aminis-death-iranian-women-cut-hair-burn-their-hijabs-3356874
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.