ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಇಂದು ಬಿಜೆಪಿ ಹಿರಿಯರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಅಲ್ಲದೇ ಅವರು ತಾವು ಹೊಸದಾಗಿ ರಚಿಸಿದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ.
“ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಾಹಬ್ ಸದಾ ರಾಷ್ಟ್ರವನ್ನು ಎಲ್ಲಕ್ಕಿಂತ ಮಿಗಿಲಾಗಿ ಇರಿಸಿದ್ದಾರೆ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರ ಪರವಾಗಿ ಅವರನ್ನು ಮತ್ತು ಅವರ ಬೆಂಬಲಿಗರನ್ನು ಬಿಜೆಪಿ ಕುಟುಂಬಕ್ಕೆ ಸ್ವಾಗತಿಸಲು ನಾನು ಸಂತೋಷಪಡುತ್ತೇನೆ” ಎಂದು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ
ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.
ಸಿಂಗ್ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.
ಸೆಪ್ಟೆಂಬರ್ 12 ರಂದು ಶಾ ಅವರೊಂದಿಗಿನ ಭೇಟಿಯ ನಂತರ, ರಾಷ್ಟ್ರೀಯ ಭದ್ರತೆ, ಪಂಜಾಬ್ನಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ-ಭಯೋತ್ಪಾದನೆಯ ಪ್ರಕರಣಗಳು ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಭವಿಷ್ಯದ ಮಾರ್ಗಸೂಚಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅವರು ಚರ್ಚೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.
Former Punjab CM Shri @capt_amarinder merged his party Punjab Lok Congress (PLC) and joined BJP in presence of senior party leaders at BJP headquarters in New Delhi. #JoinBJP pic.twitter.com/5nMFtU1Hm1
— BJP (@BJP4India) September 19, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.