ನ್ಯೂಯಾರ್ಕ್: “ಇದು ಯುದ್ಧದ ಸಮಯವಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಸರಿಯಾಗಿಯೇ ಹೇಳಿದ್ದಾರೆ” ಎಂದು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಹೇಳಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದಲ್ಲಿ ಭಾಷಣ ಮಾಡಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಈ ಹೇಳಿಕೆ ನೀಡಿದ್ದಾರೆ.
ಇತ್ತೀಚಿಗೆ ಉಜ್ಬೇಕಿಸ್ತಾನದ ಸಮರ್ಖಂಡ್ನಲ್ಲಿ ನಡೆದ ಎರಡು ದಿನಗಳ ಶಾಂಘೈ ಸಹಕಾರ ಸಂಘಟನೆ(ಎಸ್ಸಿಒ) ಶೃಂಗಸಭೆ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು, “ಇದು ಯುದ್ಧದ ಸಮಯವಲ್ಲ. ಉಕ್ರೇನ್ ಜೊತೆಗಿನ ಸಂಘರ್ಷ ಕೊನೆಗೊಳಿಸಿ” ಎಂದು ಕಿವಿಮಾತು ಹೇಳಿದ್ದರು.
“ಇದು ಪಶ್ಚಿಮದ ದೇಶಗಳ ವಿರುದ್ಧ ಸೇಡು ತೀರಿಸಿಕೊಳ್ಳುವ ಅಥವಾ ಪೂರ್ವದ ದೇಶಗಳ ವಿರುದ್ಧ ಪಶ್ಚಿಮವನ್ನು ಎತ್ತಿಕಟ್ಟುವ ಸಮಯವಲ್ಲ. ತಮ್ಮ ಮುಂದಿರುವ ಜಾಗತಿಕ ಸವಾಲುಗಳನ್ನು ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಎದುರಿಸಬೇಕು. ಶಾಂತಿಯುತ ಮಾತುಕತೆಯಿಂದ ಸಕಲ ರೀತಿಯ ಪ್ರಗತಿ ಸಾಧ್ಯ” ಎಂದು ಮೋದಿ ಹೇಳಿದ್ದರು.
ಮೋದಿ ಮಾತಿಗೆ ಅಮೆರಿಕ ಸೇರಿದಂತೆ ಜಾಗತಿಯ ಮಾಧ್ಯಮಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಫ್ರೆಂಚ್ ಅಧ್ಯಕ್ಷರೂ ಮೋದಿ ಮಾತನ್ನು ಪುನರುಚ್ಛರಿಸಿದ್ದಾರೆ.
New York, USA | Indian PM Modi was right when he said that time is not for war, not for revenge against the west or for opposing the west against east. It is time for our sovereign equal states to cope together with challenges we face: French President Emmanuel Macron at #UNGA pic.twitter.com/HJBZJELhEF
— ANI (@ANI) September 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.