ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಭೆ ನಡೆಸಿದ್ದು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಸಂಬಂಧಿಸಿದಂತೆ ನಡೆಯುತ್ತಿರುವ ಶೋಧಗಳು ಮತ್ತು ಭಯೋತ್ಪಾದಕ ಶಂಕಿತರ ವಿರುದ್ಧ ಕ್ರಮಗಳ ಕುರಿತು ಚರ್ಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಮಹಾನಿರ್ದೇಶಕ ದಿನಕರ್ ಗುಪ್ತಾ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ದೇಶಾದ್ಯಂತ ಭಯೋತ್ಪಾದಕ ಶಂಕಿತರು ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಶಾ ಅವರು ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇಶದಾದ್ಯಂತ ಏಕಕಾಲದಲ್ಲಿ ನಡೆದ ದಾಳಿಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ 11 ರಾಜ್ಯಗಳಲ್ಲಿನ ಪಿಎಫ್ಐನ 106 ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಕೇರಳದಲ್ಲಿ ಗರಿಷ್ಠ ಸಂಖ್ಯೆಯ 22 ಬಂಧನಗಳನ್ನು ಮಾಡಲಾಗಿದೆ. ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ತಲಾ 20, ತಮಿಳುನಾಡಿನಲ್ಲಿ 10, ಅಸ್ಸಾಂನಲ್ಲಿ 9, ಉತ್ತರ ಪ್ರದೇಶದಲ್ಲಿ, ಆಂಧ್ರಪ್ರದೇಶದಲ್ಲಿ 5 , ಮಧ್ಯಪ್ರದೇಶದಲ್ಲಿ 4 , ಪುದುಚೇರಿ ಮತ್ತು ದೆಹಲಿಯಲ್ಲಿ ತಲಾ 3 ಮತ್ತು ರಾಜಸ್ಥಾನದಲ್ಲಿ 2 ಬಂಧನಗಳನ್ನು ಮಾಡಲಾಗಿದೆ. ಅಧಿಕಾರಿಗಳ ಪ್ರಕಾರ, ದಾಳಿಯ ಸಮಯದಲ್ಲಿ ಈ ಬಂಧನಗಳು ನಡೆದಿದ್ದು, ಇದು ಇಲ್ಲಿಯವರೆಗಿನ ಅತಿದೊಡ್ಡ ತನಿಖಾ ಪ್ರಕ್ರಿಯೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.