ಮಂಗಳೂರು: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಇವರ ನೇತೃತ್ವದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನಿಯೋಗ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.
ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು 2 ಕೋಟಿ ರೂಪಾಯಿ ಮಂಜೂರಾತಿಗೆ ಅನುಮತಿ ನೀಡಿದರು.
ಈ ಸಂದರ್ಭ ಸಮಿತಿ ಸಂಚಾಲಕರಾದ ಮತ್ಸ್ಯರಾಜ್ ಉಮೇಶ್ ಟಿ.ಕರ್ಕೇರ, ಪ್ರ.ಕಾ ಗಣೇಶ್ ಹೊಸಬೆಟ್ಟು, ಕೃಷ್ಣಶೆಟ್ಟಿ, ಪುರುಷೋತ್ತಮ್ ಎನ್.ಆರ್ ಮತ್ತಿತರ ಪದಾಧಿಕಾರಿಗಳು ನಿಯೋಗದಲ್ಲಿದ್ದರು.
ಸರಕಾರದಿಂದ ಅನುದಾನ ಒದಗಿಸಿದ ಮುಖ್ಯಮಂತ್ರಿಗಳಿಗೆ, ಸಂಸದರಿಗೆ , ಶಾಸಕರಿಗೆ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಕೃತಜ್ಞತೆ ಅರ್ಪಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.