ನವದೆಹಲಿ: ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಅವರು ಗುರುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೇ ಭಾಗವತ್ ಅವರನ್ನು ರಾಷ್ಟ್ರಪಿತ ಎಂದು ಕರೆದಿದ್ದಾರೆ.
ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಕಚೇರಿ ಇರುವ ದೆಹಲಿಯ ಮಸೀದಿಯಲ್ಲಿ ಇಬ್ಬರೂ ಸುಮಾರು ಒಂದು ಗಂಟೆ ಕಾಲ ಸಭೆ ನಡೆಸಿದ್ದಾರೆ
ಸಭೆಯ ನಂತರ, ಆರ್ಎಸ್ಎಸ್ ಮುಖ್ಯಸ್ಥರು ತಮ್ಮ ಆಹ್ವಾನದ ಮೇರೆಗೆ ಮದರ್ಸಾ ತಜ್ವೀದುಲ್ ಕುರಾನ್ಗೆ ಭೇಟಿ ನೀಡಿದರು ಮತ್ತು ಅಲ್ಲಿನ ಮಕ್ಕಳೊಂದಿಗೆ ಸಂವಾದ ನಡೆಸಿದರು ಎಂದು ಇಲ್ಯಾಸಿ ತಿಳಿಸಿದರು.
ನಮ್ಮ ಡಿಎನ್ಎ ಒಂದೇ, ದೇವರನ್ನು ಪೂಜಿಸುವ ವಿಧಾನ ಮಾತ್ರ ವಿಭಿನ್ನವಾಗಿದೆ ಎಂದಿದ್ದಾರೆ
ಭಾಗವತ್ ಅವರೊಂದಿಗೆ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಗೋಪಾಲ್, ರಾಮ್ ಲಾಲ್ ಮತ್ತು ಇಂದ್ರೇಶ್ ಕುಮಾರ್ ಇದ್ದರು. ಲಾಲ್ ಈ ಹಿಂದೆ ಬಿಜೆಪಿಯ ಸಾಂಸ್ಥಿಕ ಕಾರ್ಯದರ್ಶಿಯಾಗಿದ್ದರೆ, ಕುಮಾರ್ ಮುಸ್ಲಿಂ ರಾಷ್ಟ್ರೀಯ ಮಂಚ್ನ ಪೋಷಕರಾಗಿದ್ದಾರೆ.
ಸಭೆಯ ಹೆಚ್ಚಿನ ವಿವರಗಳನ್ನು ಹಂಚಿಕೊಂಡ ಅಹ್ಮದ್ ಇಲ್ಯಾಸಿಯವರ ಸಹೋದರ ಸುಹೈಬ್ ಇಲ್ಯಾಸಿ, “ನಮ್ಮ ತಂದೆಯ ಪುಣ್ಯತಿಥಿಯಂದು ನಮ್ಮ ಆಹ್ವಾನದ ಮೇರೆಗೆ ಭಾಗವತ್ ಆಗಮಿಸಿದ್ದು ತುಂಬಾ ಸಂತೋಷವಾಗಿದೆ. ಇದು ದೇಶಕ್ಕೆ ಉತ್ತಮ ಸಂದೇಶವನ್ನು ನೀಡುತ್ತದೆ” ಎಂದು ಹೇಳಿದರು.
ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಭಾರತೀಯ ಇಮಾಮ್ಗಳ ಸಮುದಾಯದ ಪ್ರತಿನಿಧಿ ಧ್ವನಿಯಾಗಿದೆ ಮತ್ತು ಇದು ವಿಶ್ವದ ಅತಿದೊಡ್ಡ ಇಮಾಮ್ ಸಂಸ್ಥೆ .
ಮೋಹನ್ ಭಾಗವತ್ ಅವರು ಇತ್ತೀಚೆಗೆ ಕೋಮು ಸೌಹಾರ್ದತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಸ್ಲಿಂ ಬುದ್ಧಿಜೀವಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅವರು ಇತ್ತೀಚೆಗೆ ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೈಶಿ, ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಲೆಫ್ಟಿನೆಂಟ್ ಜನರಲ್ ಜಮೀರ್ ಉದ್ದೀನ್ ಶಾ, ಮಾಜಿ ಸಂಸದ ಶಾಹಿದ್ ಸಿದ್ದಿಕಿ ಮತ್ತು ಉದ್ಯಮಿ ಸಯೀದ್ ಶೆರ್ವಾನಿ ಅವರನ್ನು ಭೇಟಿ ಮಾಡಿದ್ದಾರೆ.
Delhi | RSS chief Mohan Bhagwat held a meeting with Dr Imam Umer Ahmed Ilyasi, Chief Imam of All India Imam Organization, at Kasturba Gandhi Marg mosque today pic.twitter.com/vxfo0IPsMa
— ANI (@ANI) September 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.