ಹುಬ್ಬಳ್ಳಿ: ಕರ್ನಾಟಕಕ್ಕೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಹುಬ್ಬಳ್ಳಿ- ಧಾರವಾಡ ಮಹಾನಗರಪಾಲಿಕೆಯು ಕರ್ನಾಟಕ ಜಿಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುರ್ಮು, ” ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ, ಒಡಿಶಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡ ಜನತೆ ದೇಶದ ಸಮಸ್ತ ಮಹಿಳೆಯರನ್ನು ಗೌರವಿಸಿದ್ದಾರೆ” ಎಂದರು.
ಹುಬ್ಬಳ್ಳಿ – ಧಾರವಾಡ ಜನರ ಪ್ರೀತಿಯು ನನ್ನನ್ನು ಪುಳಕಗೊಳಿಸಿದೆ. ಇದು ಇಡೀ ದೇಶದ ಮಹಿಳೆಯರಿಗೆ ಸಂದ ಗೌರವವಾಗಿದೆ ಎಂದಿದ್ದಾರೆ.
“ಪ್ರಾಚೀನತೆ ಮತ್ತು ಆಧುನಿಕತೆಯ ಸಂಗಮವಾಗಿರುವ ಹುಬ್ಬಳ್ಳಿ-ಧಾರವಾಡ ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾದಾನ ಮಾಡುವ ಮೂಲಕ ವಿದ್ಯಾಕಾಶಿಯಾಗಿ ಹೆಸರು ಪಡೆದಿದೆ ಎಂದರು.
ರಾಷ್ಟ್ರಪತಿಗೆ ಸಿದ್ಧಾರೂಢರ ಮೂರ್ತಿಯನ್ನು ಈ ವೇಳೆ ನೆನಪಿನ ಕಾಣಿಕೆಯಾಗಿ ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.