ನವದೆಹಲಿ: ಎನ್ಐಎ ಮತ್ತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗೆ ಆಘಾತ ನೀಡಿದೆ. ದೇಶದ ಎಂಟು ರಾಜ್ಯಗಳಲ್ಲಿನ ಪಿಎಫ್ಐ ಕಚೇರಿಗಳು ಮತ್ತು ಕಾರ್ಯಕರ್ತರ ಮನೆ ಮೇಲೆ ಇಂದು ದಾಳಿ ನಡೆದಿದ್ದು ನೂರಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ರಾಜ್ಯಗಳ ವಿವಿಧ ತನಿಖಾ ಸಂಸ್ಥೆಗಳ ಜೊತೆ ಸೇರಿ ಪಿಎಫ್ಐ ಮೇಲೆ ಮತ್ತೊಂದು ಸುತ್ತಿನ ದಾಳಿ ನಡೆಸಿರುವ ಎನ್ಐಎ 100ಕ್ಕೂ ಹೆಚ್ಚು ಜನರನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಗುರುವಾರ ದೇಶ ವ್ಯಾಪಿಯಾಗಿ ಪಿಎಫ್ಐ ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ 106 ಜನರನ್ನು ವಶಕ್ಕೆ ಪಡೆದುಕೊಂಡಿತ್ತು.
ಇಂದು ಕರ್ನಾಟಕ, ಗುಜರಾತ್, ದೆಹಲಿ, ಅಸ್ಸಾಂ ಸೇರಿ ಎಂಟು ರಾಜ್ಯಗಳಲ್ಲಿ ದಾಳಿ ಮಾಡಲಾಗಿದೆ. ಕರ್ನಾಟಕದ ಉಡುಪಿ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಚಾಮರಾಜನಗರ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ದಾಳಿ ನಡೆಸಿ ಹಲವಾರು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭಯೋತ್ಪಾದನೆ ಚಟುವಟಿಕೆಗಳಿಗೆ ಧನ ಸಹಾಯ, ಶಸ್ತ್ರಾಸ್ತ್ರ ತರಬೇತಿ ನೀಡಲು ಶಿಬಿರಗಳ ಆಯೋಜನೆ, ಉಗ್ರವಾದ ಚಟುವಟಿಕೆಗಳಿಗೆ ಉತ್ತೇಜನ, ವಿದ್ವಾಂಸಕ ಕೃತ್ಯಗಳಲ್ಲಿ ಭಾಗಿ ಸೇರಿದಂತೆ ಹಲವಾರು ಆರೋಪಗಳು ಪಿಎಫ್ ಐ ಮೇಲೆ ಇದೆ.
4 persons linked with PFI detained from the Nagarbera area today. Our operation against PFI is on in many parts of the district: Hiren Nath, ADGP (Special Branch) Assam
Earlier, Assam police arrested 11 leaders of workers of PFI from various parts of the state& one from Delhi
— ANI (@ANI) September 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.