ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ವೆಲ್ಸ್ಬಟಪುರ ಗ್ರಾಮದಲ್ಲಿ ಸೋಮವಾರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಪಾಕಿಸ್ಥಾನಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಹತ್ಯೆಗೀಡಾದ ಭಯೋತ್ಪಾದಕನನ್ನು ಅಬು ಹುರಾಹ್ ಎಂದು ಗುರುತಿಸಲಾಗಿದೆ.
ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಟ್ವೀಟ್ ಮಾಡಿದ್ದು, “ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ಅಬು ಹುರಾಹ್ ಎಂದು ಗುರುತಿಸಲಾಗಿದೆ, ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಎಂ ಜೊತೆ ಸಂಬಂಧ ಹೊಂದಿರುವ ವಿದೇಶಿ ಪಾಕಿಸ್ತಾನಿ ಭಯೋತ್ಪಾದಕ” ಎಂದಿದೆ.
ಕುಲ್ಗಾಮ್ನಲ್ಲಿ ಅಪರಿಚಿತ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ಮೇರೆಗೆ, ಭಾರತೀಯ ಸೇನೆಯು ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಸಿಆರ್ಪಿಎಫ್ನೊಂದಿಗೆ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
“ಗ್ರಾಮದಲ್ಲಿರುವ ಶಂಕಿತ ಮನೆಗಳ ಸುತ್ತ ಭದ್ರತಾ ಪಡೆಗಳು ಕ್ಷಿಪ್ರ ನಿಯೋಜನೆ ನಡೆಸಿ. ಒಂದು ಮನೆಯಲ್ಲಿ ಒಂದರಿಂದ ಇಬ್ಬರು ಭಯೋತ್ಪಾದಕರ ಉಪಸ್ಥಿತಿಯನ್ನು ಖಚಿತಪಡಿಸಿದ ಬಳಿಕ ಭದ್ರತಾ ಪಡೆಗಳು ಸುತ್ತಮುತ್ತಲಿನ ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಪ್ರಾರಂಭಿಸಿದವು. ಬಳಿಕ ಗುಂಡಿನ ಚಕಮಕಿ ಆರಂಭವಾಗಿ ಒರ್ವ ಮೃತಪಟ್ಟಿದ್ದಾನೆ.
#KulgamEncounterUpdate: Killed #terrorist has been identified as Abu Hurarah, a foreign #Pakistani terrorist linked with proscribed terror outfit JeM. #Incriminating materials, arms & ammunition including AK rifle recovered: ADGP Kashmir@JmuKmrPolice https://t.co/Nd2G3ufPN9
— Kashmir Zone Police (@KashmirPolice) September 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.