ನವದೆಹಲಿ: ಭಾರತದ ಗಾಯಕಿ ಲತಾ ಮಂಗೇಶ್ಕರ್ ಅವರ 93ನೇ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ವಿಶೇಷ ಸಂದರ್ಭವನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಹೃದಯ ಸ್ಪರ್ಶಿ ಗೌರವ ಸಲ್ಲಿಸಿದ್ದಾರೆ.
ಅಯೋಧ್ಯೆಯ ಚೌಕ್ಗೆ ಬುಧವಾರ ಲತಾ ಮಂಗೇಶ್ಕರ್ ಅವರ ಹೆಸರನ್ನು ಇಡಲಾಗುವುದು ಎಂದು ಟ್ವೀಟ್ನಲ್ಲಿ ಪ್ರಧಾನಿ ತಿಳಿಸಿದ್ದಾರೆ
“ಲತಾ ದೀದಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ನೆನಪಿಸಿಕೊಳ್ಳುತ್ತೇನೆ. ನನಗೆ ಇನ್ನೂ ನೆನಪಿದೆ ಅವರೊಂದಿಗೆ ಆಡಿದ ಪ್ರೀತಿಯ ಅಸಂಖ್ಯಾತ ಸಂವಹನಗಳು. ಇಂದು ಅಯೋಧ್ಯೆಯ ಚೌಕ್ಗೆ ಅವರ ಹೆಸರಿಡಲು ನನಗೆ ಸಂತೋಷವಾಗಿದೆ. ಅದು ಮಹಾನ್ ಭಾರತೀಯ ಐಕಾನ್ಗೆ ಅಮೋಘ ಗೌರವ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿರುವ ಚೌಕ್ಗೆ ಭಾರತ ರತ್ನ ಗೌರವ ಪುರಸ್ಕೃತೆ ಲತಾ ಅವರ ಹೆಸರನ್ನು ಇಡಲು ನಿರ್ಧಾರ ಕೈಗೊಂಡಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಫೆಬ್ರವರಿ 6 ರಂದು ಲತಾ ಮಂಗೇಶ್ಕರ್ ನಿಧನರಾದ ಕೆಲವು ದಿನಗಳ ನಂತರ, ಯೋಗಿ ಆದಿತ್ಯನಾಥ್ ಅವರು ಚೌಕ್ಗೆ ಲತಾ ಮಂಗೇಶ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಘೋಷಣೆ ಮಾಡಿದ್ದರು. ಇಂದು ನಾಮಕರಣ ಕಾರ್ಯ ನಡೆಯಲಿದೆ.
ಉತ್ತರ ಪ್ರದೇಶದ ಅಯೋಧ್ಯೆಯ ಇಂಟರ್ಸೆಕ್ಷನ್ನಲ್ಲಿ 14 ಟನ್ ತೂಕದ 40 ಅಡಿ ಉದ್ದ ಮತ್ತು 12 ಮೀಟರ್ ಎತ್ತರದ ವೀಣಾ ಶಿಲ್ಪವನ್ನು ಸ್ಥಾಪಿಸಲಾಗಿದೆ. ಪದ್ಮಶ್ರೀ ಪುರಸ್ಕೃತ ರಾಮ್ ಸುತಾರ್ ಈ ಬೃಹತ್ ಶಿಲ್ಪವನ್ನು ಮಾಡಿದ್ದಾರೆ.
ಸೆಪ್ಟೆಂಬರ್ 28, 1929 ರಂದು ಜನಿಸಿದ ಲತಾ ಮಂಗೇಶ್ಕರ್ ಅವರು 1942 ರಲ್ಲಿ ತಮ್ಮ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಏಳು ದಶಕಗಳ ವೃತ್ತಿಜೀವನದಲ್ಲಿ ಸಾವಿರಕ್ಕೂ ಹೆಚ್ಚು ಹಿಂದಿ ಚಲನಚಿತ್ರಗಳಿಗೆ ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಅವರು 36 ಪ್ರಾದೇಶಿಕ ಭಾರತೀಯ ಮತ್ತು ವಿದೇಶಿ ಭಾಷೆಗಳಲ್ಲಿ ತಮ್ಮ ಹಾಡುಗಳನ್ನು ಹಾಡಿದ್ದಾರೆ. ಆಕೆಯನ್ನು “ಕ್ವೀನ್ ಆಫ್ ಮೆಲೋಡಿ” ಮತ್ತು “ಇಂಡಿಯಾಸ್ ನೈಟಿಂಗೇಲ್” ಎಂದು ಕರೆಯಲಾಗುತ್ತದೆ.
Prime Minister Narendra Modi remembers late singing maestro Lata Mangeshkar on her birth anniversary; says, "I am glad that today, a Chowk in Ayodhya will be named after her." pic.twitter.com/5Xb3yWdwTR
— ANI (@ANI) September 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.