ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ನರೇಂದ್ರ ಮೋದಿಯವರ ನಾಯಕತ್ವ ಇರುವಾಗ ದೇಶದಲ್ಲಿ ವಿಧ್ವಂಸಕ ಕೃತ್ಯಗಳು ನಡೆಯಲು ಯಾವುದೇ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಿಎಫ್ಐಗೆ ನಿಷೇಧ ಹೇರಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಪಿಎಫ್ಐ ಸಂಘಟನೆಯಲ್ಲಿರುವ ಅನೇಕರು ಗಡಿಯಾಚೆ ಹೋಗಿ ತರಬೇತಿ ಪಡೆದು ಬಂದಿದ್ದಾರೆ. ಕೆಲವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದಾರೆ. ಸಂಘಟನೆ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ ಎಂದರು.
ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಬೇಡಿಕೆ ಇಟ್ಟಿದ್ದರು. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿಎಫ್ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಬೊಮ್ಮಾಯಿ ಹೇಳಿದ್ದಾರೆ.
ವಿದೇಶಿ ದೇಣಿಗೆ ಮೂಲಕ ಸಮಾಜವಿದ್ರೋಹಿ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಪಿಎಫ್ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ ಮತ್ತು ಇದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಕೂಡ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪಿಎಫ್ಐ ನಾಯಕರು ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿದ್ದರು. ಕೇಂದ್ರ ಸರ್ಕಾರ ಪಿಎಫ್ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳವರೆಗೆ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.