ನವದೆಹಲಿ: ವಾಹನಗಳಲ್ಲಿ ಆರು ಏರ್ಬ್ಯಾಗ್ಗಳನ್ನು ಹೊಂದುವ ಕಡ್ಡಾಯ ನಿಯಮದ ಅನುಷ್ಠಾನದ ದಿನಾಂಕವನ್ನು ಭಾರತ ಸರ್ಕಾರ ಮುಂದೂಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸರಣಿ ಟ್ವೀಟ್ಗಳಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.
ಕಾರುಗಳಲ್ಲಿ ಕನಿಷ್ಠ 6 ಏರ್ಬ್ಯಾಗ್ಗಳನ್ನು ಹೊಂದುವ ಹೊಸ ನಿಯಮವು ಅಕ್ಟೋಬರ್ 1, 2023 ರಿಂದ ಅನ್ವಯವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸರ್ಕಾರವು ಈ ಹಿಂದೆ ಜನವರಿ 14, 2022 ರಂದು ಕರಡು ಅಧಿಸೂಚನೆಯನ್ನು ಹೊರಡಿಸಿತ್ತು ಮತ್ತು ಅಕ್ಟೋಬರ್ 1, 2022 ರ ನಂತರ ತಯಾರಿಸಲಾದ M1 ವರ್ಗದ (8 ಆಸನಗಳವರೆಗೆ) ವಾಹನಗಳು 6 ಏರ್ಬ್ಯಾಗ್ಗಳನ್ನು ಹೊಂದಿರುವುದನ್ನು ಇದು ಕಡ್ಡಾಯಗೊಳಿಸಿತ್ತು. ಇದೀಗ ಗಡುವನ್ನು 2023ರ ಅಕ್ಟೋಬರ್ಗೆ ವಿಸ್ತರಿಸಿದೆ.
“ಆಟೋ ಉದ್ಯಮವು ಎದುರಿಸುತ್ತಿರುವ ಜಾಗತಿಕ ಪೂರೈಕೆ ಸರಪಳಿಯ ನಿರ್ಬಂಧಗಳನ್ನು ಮತ್ತು ಸ್ಥೂಲ ಆರ್ಥಿಕ ಸನ್ನಿವೇಶದ ಮೇಲೆ ಅದರ ಪ್ರಭಾವವನ್ನು ಪರಿಗಣಿಸಿ, ಪ್ಯಾಸೆಂಜರ್ ಕಾರ್ಗಳಲ್ಲಿ (M-1 ವರ್ಗ) ಕನಿಷ್ಠ 6 ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸುವ ಪ್ರಸ್ತಾಪವನ್ನು ಅಕ್ಟೋಬರ್ 1, 2023 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ” ಎಂದು ಗಡ್ಕರಿ ಹೇಳಿದ್ದಾರೆ.
Safety of all passengers travelling in motor vehicles irrespective of their cost and variants is the foremost priority.
— Nitin Gadkari (@nitin_gadkari) September 29, 2022
Considering the global supply chain constraints being faced by the auto industry and its impact on the macroeconomic scenario, it has been decided to implement the proposal mandating a minimum of 6 Airbags in Passenger Cars (M-1 Category) w.e.f 01st October 2023.
— Nitin Gadkari (@nitin_gadkari) September 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.