ನವದೆಹಲಿ: ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆಯ 2022ನೇ ಸಾಲಿನ ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತ 40 ನೇ ಸ್ಥಾನಕ್ಕೆ ಏರಿದೆ. ಇದು 7 ವರ್ಷಗಳಲ್ಲಿ 41 ಸ್ಥಾನಗಳ ಬೃಹತ್ ಜಿಗಿತವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನಾವೀನ್ಯತೆಯು ಭಾರತದಾದ್ಯಂತ ಪ್ರಚಾರ ಪಡೆದ ಪದವಾಗಿದೆ. ಭಾರತವು ಬಹಳ ದೂರ ಸಾಗಿದೆ ಮತ್ತು ತಲುಪಲು ಇನ್ನೂ ಹೊಸ ಎತ್ತರಗಳಿವೆ ಎಂದು ಅವರು ದೇಶದ ನವೋದ್ಯಮಿಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.
ಕೇಂದ್ರ ವಾಣಿಜ್ಯ ಮತ್ತು ಜವಳಿ ಖಾತೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿ, ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ಹೊಸತನವನ್ನು ಕಂಡುಕೊಳ್ಳುತ್ತಿದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಜಾಗತಿಕ ನಾವೀನ್ಯತೆ ಕೇಂದ್ರವಾಗಿ ವೇಗವಾಗಿ ಹೊರಹೊಮ್ಮುತ್ತಿದೆ ಎಂಬುದಕ್ಕೆ ಸ್ಥಿರವಾದ ಏರಿಕೆಯು ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ ನಿನ್ನೆ ಗ್ಲೋಬಲ್ ಇನ್ನೋವೇಶನ್ ಇಂಡೆಕ್ಸ್ 2022 ಅನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಸ್ವಿಟ್ಜರ್ಲೆಂಡ್ ಸತತ 12 ನೇ ವರ್ಷಕ್ಕೆ ವಿಶ್ವದ ಅತ್ಯಂತ ನವೀನ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಎರಡನೇ ಸ್ಥಾನವನ್ನು ಯುಎಸ್ ಪಡೆದುಕೊಂಡಿದೆ ನಂತರ ಸ್ವೀಡನ್, ಯುಕೆ ಮತ್ತು ನೆದರ್ಲ್ಯಾಂಡ್ಸ್ ಸ್ಥಾನ ಪಡೆದುಕೊಂಡಿವೆ.
Innovation is the buzzword across India. Proud of our innovators. We’ve come a long way and want to scale even newer heights. https://t.co/Fa82TmmnLc
— Narendra Modi (@narendramodi) September 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.