ನವದೆಹಲಿ: ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರು ಇಂದು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ(ಸಿಡಿಎಸ್)ರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇಂದು ದೆಹಲಿಯ ಸೌತ್ ಬ್ಲಾಕ್ನಲ್ಲಿ ಸಿಡಿಎಸ್ ಚೌಹಾಣ್ ಅವರು ಗೌರವ ವಂದನೆ ಸ್ವೀಕರಿಸಿದರು. ಸಿಡಿಎಸ್ ಆಗಿ ತಮ್ಮ ಮೊದಲ ಭಾಷಣದಲ್ಲಿ ಅವರು ಸೇನಾ ಪಡೆಗಳಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ನಿರೀಕ್ಷೆಗಳನ್ನು ಪೂರೈಸುವ ಮತ್ತು ಎಲ್ಲಾ ಸವಾಲುಗಳು ಮತ್ತು ತೊಂದರೆಗಳನ್ನು ಒಟ್ಟಾಗಿ ನಿಭಾಯಿಸುವ ಭರವಸೆ ನೀಡಿದರು.
“ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅತ್ಯುನ್ನತ ಶ್ರೇಣಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನಾನು ಹೆಮ್ಮೆಪಡುತ್ತೇನೆ. ನಾನು ರಕ್ಷಣಾ ಸಿಬ್ಬಂದಿ ಮುಖ್ಯಸ್ಥನಾಗಿ ಮೂರು ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ನಾವು ಎಲ್ಲಾ ಸವಾಲುಗಳು ಮತ್ತು ತೊಂದರೆಗಳನ್ನು ಒಟ್ಟಿಗೆ ನಿಭಾಯಿಸುತ್ತೇವೆ”ಎಂದು ಅವರು ಹೇಳಿದರು.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ, ನೌಕಾಪಡೆಯ ಉಪ ಮುಖ್ಯಸ್ಥ ವೈಸ್ ಅಡ್ಮಿರಲ್ ಎಸ್ ಎನ್ ಘೋರ್ಮಾಡೆ ಮತ್ತು ಏರ್ ಮಾರ್ಷಲ್ ಬಿಆರ್ ಕೃಷ್ಣ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Delhi | I'm proud to be assuming the responsibility of the highest rank in the Indian Armed Forces. I will try to fulfill the expectations from the three defence forces as the Chief of Defence Staff. We will tackle all challenges & difficulties together: CDS General Anil Chauhan pic.twitter.com/QDkPijylxy
— ANI (@ANI) September 30, 2022
Delhi | CDS General Anil Chauhan with Army chief General Manoj Pande and IAF Chief Air Chief Marshal VR Chaudhari along with Navy vice chief Vice Admiral SN Ghormade and Air Marshal BR Krishna pic.twitter.com/mDO5BxiJng
— ANI (@ANI) September 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.