ಬೆಂಗಳೂರು: ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಶುಕ್ರವಾರ ಅಂಕಿತ ಹಾಕಿದ್ದಾರೆ.
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2022ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಈ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ಬಿದ್ದ ಹಿನ್ನೆಲೆಯಲ್ಲಿ ಇಂದಿನಿಂದ ಅದು ಕಾನೂನು ರೂಪದಲ್ಲಿ ಜಾರಿಯಾಗಲಿದೆ.
ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ರಕ್ಷಣೆಗಾಗಿ, ಬಲವಂತದ ಮತಾಂತರ, ಆಮಿಷ ಮತಾಂತರ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ತಡೆಯಲು ಈ ಈ ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2022 ಅನ್ನು ವಿಧಾನ ಪರಿಷತ್ತಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದ್ದರು. ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ಮಸೂದೆ ಧ್ವನಿಮತದ ಮೂಲಕ ಅಂಗೀಕಾರಗೊಂಡಿತ್ತು.
.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.