ನ್ಯೂಯಾರ್ಕ್: 2022ನೇ ಸಾಲಿನ ನೊಬೆಲ್ ಪ್ರಶಸ್ತಿ ಇಂದು ಘೋಷಣೆಯಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಜಿನೋಮ್‌ಗಳಿಗೆ ಸಂಬಂಧಿಸಿದ ಸಂಶೋಧನೆಗಳಿಗಾಗಿ ಸ್ವಾಂಟೆ ಪಾಬೊ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.
ಅಳಿವಿನಂಚಿನಲ್ಲಿರುವ ಹೋಮಿನಿನ್‌ಗಳು ಮತ್ತು ಮಾನವ ವಿಕಾಸದ ಜೀನೋಮ್‌ಗಳಿಗೆ ಸಂಬಂಧಿಸಿದ ಸಂಶೋಧನೆಗಳಿಗಾಗಿ ಸ್ವಾಂಟೆ ಪಾಬೊ ಅವರಿಗೆ ನೋಬೆಲ್ ಪ್ರಶಸ್ತಿ ಲಭಿಸಿದೆ.
ವೈಜ್ಞಾನಿಕ ಜಗತ್ತಿನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಡನ್‌ನ ಕರೋಲಿನ್ಸ್ಕಾ ಇನ್‌ಸ್ಟಿಟ್ಯೂಟ್‌ನ ನೊಬೆಲ್ ಅಸೆಂಬ್ಲಿಯಿಂದ ನೀಡಲಾಗುತ್ತದೆ ಮತ್ತು ಇದು 10 ಮಿಲಿಯನ್ ಸ್ವೀಡಿಷ್ ಕ್ರೌನ್ ($900,357) ಮೌಲ್ಯದ್ದಾಗಿದೆ.
ಸ್ವೀಡಿಷ್ ಡೈನಮೈಟ್ ಸಂಶೋಧಕ ಮತ್ತು ಶ್ರೀಮಂತ ಉದ್ಯಮಿ ಆಲ್ಫ್ರೆಡ್ ನೊಬೆಲ್ ಅವರ ಇಚ್ಛೆಯಂತೆ ಇದನ್ನು ರಚಿಸಲಾಗಿದೆ. ವಿಜ್ಞಾನ, ಸಾಹಿತ್ಯ ಮತ್ತು ಶಾಂತಿಯಲ್ಲಿನ ಸಾಧನೆಗಳಿಗಾಗಿ 1901 ರಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ, ಆದರೆ ಅರ್ಥಶಾಸ್ತ್ರಕ್ಕಾಗಿ ನೋಬೆಲ್ ಅನ್ನು ನಂತರದ ದಿನಗಳಲ್ಲಿ ಸೇರ್ಪಡೆಗೊಳಿಸಲಾಯಿತು.
ಮಂಗಳವಾರ ಭೌತಶಾಸ್ತ್ರ, ಬುಧವಾರ ರಸಾಯನ ಶಾಸ್ತ್ರ ಮತ್ತು ಗುರುವಾರ ಸಾಹಿತ್ಯ ವಲಯದಲ್ಲಿನ ಸಾಧನೆ ಮಾಡಿದವರಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗುವುದು.
BREAKING NEWS:
The 2022 #NobelPrize in Physiology or Medicine has been awarded to Svante Pääbo “for his discoveries concerning the genomes of extinct hominins and human evolution.” pic.twitter.com/fGFYYnCO6J— The Nobel Prize (@NobelPrize) October 3, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.