News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು: ಮಾತಾ ವೈಷ್ಣೋದೇವಿ ದೇಗುಲದಲ್ಲಿ ಅಮಿತ್‌ ಶಾ ಪ್ರಾರ್ಥನೆ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಬೆಳಗ್ಗೆ ಕತ್ರಾದಲ್ಲಿರುವ ಶ್ರೀ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಅವರು ಸಂಜಿಚಟ್ ಹೆಲಿಪ್ಯಾಡ್ ಮೂಲಕ ಕತ್ರಾ ದೇಗುಲವನ್ನು ತಲುಪಿದರು. ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇದ್ದರು.

ಕೇಂದ್ರ ಗೃಹ ಸಚಿವರಾಗಿ ನೇಮಕಗೊಂಡ ನಂತರ ವೈಷ್ಣೋದೇವಿಗೆ ಶಾ ಅವರ ಮೊದಲ ಭೇಟಿ ಇದಾಗಿದೆ.

ನವರಾತ್ರಿ ಉತ್ಸವದ ಒಂಬತ್ತನೇ ದಿನದಂದು ಅವರು ಮಾತೆ ದರ್ಶನ ಪಡೆದುಕೊಂಡಿದ್ದಾರೆ.

ಶಾ ನಂತರ ವೈಷ್ಣೋ ದೇವಿ ದೇವಸ್ಥಾನದಿಂದ ಸುಮಾರು ಒಂದೂವರೆ ಗಂಟೆಗಳ ದೂರದಲ್ಲಿರುವ ರಾಜೌರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಚಿವ ಶಾ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಜಮ್ಮುವಿನ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top