News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 3rd December 2022


×
Home About Us Advertise With s Contact Us

ಉಜ್ಜಯಿನಿ ಮಹಾಕಾಳೇಶ್ವರ ದೇಗುಲಕ್ಕೆ ಶೀಘ್ರದಲ್ಲೇ ರೋಪ್‌ ವೇ

ಉಜ್ಜಯಿನಿ: ಉಜ್ಜಯಿನಿ ಜಂಕ್ಷನ್ ರೈಲು ನಿಲ್ದಾಣದಿಂದ ಮಧ್ಯಪ್ರದೇಶ ರಾಜ್ಯದ ಮಹಾಕಾಳೇಶ್ವರ ದೇವಸ್ಥಾನದವರೆಗೆ 1.99-ಕಿಮೀ ಉದ್ದದ ರೋಪ್‌ವೇ ನಿರ್ಮಿಸಲು ಅಕ್ಟೋಬರ್ 1 ರಂದು ನ್ಯಾಷನಲ್ ಹೈವೇಸ್ ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ (NHLML) ಬಿಡ್‌ಗಳನ್ನು ಆಹ್ವಾನಿಸಿದೆ.

ವಾರಣಾಸಿಯ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮಾದರಿಯಲ್ಲಿ ನಿರ್ಮಿಸಲಾದ ಬೃಹತ್ ‘ಮಹಾಕಾಲ್ ಕಾರಿಡಾರ್’ ಯೋಜನೆಯನ್ನು ಉಜ್ಜಯಿನಿಯಲ್ಲಿ ಅಕ್ಟೋಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸುವ ಮುನ್ನ ಈ ಬೆಳವಣಿಗೆ ನಡೆದಿದೆ

ಕಾಶಿ ವಿಶ್ವನಾಥನಂತೆಯೇ, ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯವು ‘ಜ್ಯೋತಿರ್ಲಿಂಗʼ ಮತ್ತು ಭಗವಾನ್ ಶಿವನ ದೇವಾಲಯವಾಗಿದೆ.

209.34 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿರುವ ರೋಪ್‌ವೇ ಯೋಜನೆಯನ್ನು ವಿನ್ಯಾಸ, ನಿರ್ಮಾಣ, ನಿರ್ವಹಣೆ ಮತ್ತು ವರ್ಗಾವಣೆ (ಹೈಬ್ರಿಡ್ ಆನ್ಯುಟಿ) ಆಧಾರದ ಮೇಲೆ ಕಾರ್ಯಗತಗೊಳಿಸಲಾಗುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top