News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 1st December 2022


×
Home About Us Advertise With s Contact Us

ಸುವರ್ಣಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ: ಸಿಎಂ

ಬೆಂಗಳೂರು: ಈ ವರ್ಷದಲ್ಲೇ ಬೆಳಗಾವಿ ಸುವರ್ಣಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಯಾಗಲಿದೆ. ಇದಕ್ಕಾಗಿ ಕರ್ನಾಟಕ ಸರ್ಕಾರವು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆ ಯೋಜನೆ ಮಾಡಿದ್ದ ‘ಕಿತ್ತೂರು ಚೆನ್ನಮ್ಮಾಜಿ ವಿಜಯ ಯಾತ್ರೆ’ಯನ್ನು ಉದ್ದೇಶಿಸಿ ಅವರು ಮಾತನಾಡಿದರು‌.

“ಬೆಳಗಾವಿ ಜಿಲ್ಲಾ ಉಸ್ತುವಾರಿ ಆಗಿದ್ದ ಸಂದರ್ಭದಲ್ಲಿ ಕಿತ್ತೂರು ಉತ್ಸವಕ್ಕೆ ಮೂರು ದಿನಗಳಲ್ಲಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ್ದೆ.  ಚೆನ್ನಮ್ಮಾಳ ಸಂದೇಶ ಹೊತ್ತ ಕಿತ್ತೂರು ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿನ ತನಕ ಬಂದಿತು.  ಈಗ ಅದು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಆರಂಭಗೊಂಡು ಕಿತ್ತೂರಿಗೆ ಜ್ಯೋತಿ ತೆರಳಲಿದೆ” ಎಂದಿದ್ದಾರೆ.

“ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗೆಜೆಟ್‌ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮಳನ್ನು ಮೊದಲು ಸ್ವಾತಂತ್ರ್ಯ ಹೋರಾಟ ಆರಂಭಿಸಿದ ದಿಟ್ಟ ರಾಣಿ ಎಂದು ಉಲ್ಲೇಖಿಸಲಾಗಿದೆ. ಇದನ್ನು ನ್ಯಾಷನಲ್ ಆರ್ಚೀವ್ಸ್‌ಗೆ ಕಳುಹಿಸಿ ದಾಖಲೆಯ ಪುಟ ಸೇರಿಸುವಂತೆ ಮಾಡಲಾಗುವುದು” ಎಂದಿದ್ದಾರೆ.

ಕಿತ್ತೂರು, ಬೈಲಹೊಂಗಳ ಮತ್ತು ಸಂಗೊಳ್ಳಿ ಮುಂತಾದ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರವಾಸಿ ತಾಣಗಳಾಗಿ ಪರಿವರ್ತಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆಯನ್ನು ಸರ್ಕಾರ ಆರಂಭಿಸಿದ್ದು ಅದು ಮುಂದಿನ ತಿಂಗಳು ತೆರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top