ನವದೆಹಲಿ: ಗಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಹುಡುಗನೊಬ್ಬ ಸಂಸ್ಕೃತದಲ್ಲಿ ಕ್ರಿಕೆಟ್ ಕಾಮೆಂಟರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಭಾರೀ ಸುದ್ದಿ ಮಾಡಿತ್ತು. ಆ ವಿಡಿಯೋ ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಗಮನವನ್ನೂ ಸೆಳೆದಿದೆ. ಅವರು ಕೂಡ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೋದಲ್ಲಿ ಬಾಲಕರ ಗುಂಪೊಂದು ಕ್ರಿಕೆಟ್ ಆಡುತ್ತಿದ್ದು, ಹಿನ್ನೆಲೆಯಲ್ಲಿ ಸಂಸ್ಕೃತ ಕಾಮೆಂಟರಿ ಕೇಳಿ ಬರುತ್ತದೆ. ಬಾಲಕರು ಸಂಸ್ಕೃತದಲ್ಲಿ ಪರಸ್ಪರ ಮಾತನಾಡುತ್ತಿರುವುದನ್ನು ನಾವು ಕಾಣಬಹುದು. ಸಂಸ್ಕೃತ ಕಾಮೆಂಟರಿಯ ಪರಿಕಲ್ಪನೆ ಮತ್ತು ಆತನ ನಿರರ್ಗಳತೆ ನೆಟ್ಟಿಗರನ್ನು ಆಶ್ಚರ್ಯಚಕಿತಗೊಳಿಸಿದೆ.
ಲಕ್ಷ್ಮಿ ನಾರಾಯಣ ಬಿ ಎಸ್ ಎಂಬ ಹೆಸರಿನ ಟ್ವಿಟರ್ ಬಳಕೆದಾರರು “ಸಂಸ್ಕೃತ ಮತ್ತು ಕ್ರಿಕೆಟ್” ಎಂಬ ಒಕ್ಕಣೆಯೊಂದಿಗೆ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
ಈ ಪೋಸ್ಟ್ ಅನ್ನು ಹಂಚಿಕೊಂಡಿರುವ ಮೋದಿ, “ಇದನ್ನು ನೋಡುವುದು ಹೃದಯಸ್ಪರ್ಶಿಯಾಗಿದೆ. ಈ ಪ್ರಯತ್ನವನ್ನು ಕೈಗೊಂಡವರಿಗೆ ಅಭಿನಂದನೆಗಳು. ಕಳೆದ ವರ್ಷ ಮನ್ ಕೀ ಬಾತ್ ಕಾರ್ಯಕ್ರಮವೊಂದರಲ್ಲಿ ನಾನು ಕಾಶಿಯಲ್ಲಿ ಇದೇ ರೀತಿಯ ಪ್ರಯತ್ನದ ವಿಡಿಯೋವನ್ನು ಹಂಚಿಕೊಂಡಿದ್ದೆ. ಅದನ್ನೂ ಕೂಡ ಇಲ್ಲಿ ಹಂಚಿಕೊಳ್ಳುತ್ತೇನೆ” ಎಂದು ಯೂಟ್ಯೂಬ್ ಲಿಂಕ್ ಹಾಕಿದ್ದಾರೆ.
This is heartening to see…Congrats to those undertaking this effort.
During one of the #MannKiBaat programmes last year I had shared a similar effort in Kashi. Sharing that as well. https://t.co/bEmz0u4XvO https://t.co/A2ZdclTTR7
— Narendra Modi (@narendramodi) October 4, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.