ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಪ್ಲಾಸ್ಟಿಕ್ ನಿಂದ ನಿರ್ಮಿಸಿರುವ ರಾಕ್ಷಸನ ಕಲಾಕೃತಿಗಾಗಿ ನೈಋತ್ಯ
ರೈಲ್ವೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಒಂದು ದೊಡ್ಡ ಸವಾಲಾಗಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರಿನ ನೈಋತ್ಯ ಸಾರ್ವಜನಿಕ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕುರಿತು ವಿಶಿಷ್ಟ ಜಾಗೃತಿ ಅಭಿಯಾನವನ್ನು ನಡೆಸಲಾಗಿತ್ತು. ಇದರಡಿ ತ್ಯಾಜ್ಯ ಪ್ಲಾಸ್ಟಿಕ್‌ಗಳಿಂದ ಕಲಾಕೃತಿ ರಚಿಸಲಾಗಿದೆ. ಇದಕ್ಕೆ ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಶ್ಲಾಘನೆ ವ್ಯಕ್ತವಾಗಿದೆ.
ಸೋಮವಾರ ರೈಲ್ವೆ ಸಿಬ್ಬಂದಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಈ ರಾಕ್ಷಸನನ್ನು ನಿರ್ಮಾಣ ಮಾಡಿದ್ದಾರೆ.
ರೈಲು ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪ್ಲಾಸ್ಟಿಕ್ ಬಾಟಲಿಗಳಿಂದ ನಿರ್ಮಿಸಲಾದ ರಾಕ್ಷಸ ಆಕಾರದ ಶಿಲ್ಪ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ನೈಋತ್ಯ ಸಂಸ್ಥೆಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದು, ಪ್ಲಾಸ್ಟಿಕ್ ತ್ಯಾಜ್ಯದ ಸರಿಯಾದ ವಿಲೇವಾರಿ ಕುರಿತು ಜಾಗೃತಿ ಮೂಡಿಸುತ್ತಿದೆ.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಪ್ಲಾಸ್ಟಿಕ್ ನಿಂದ ನಿರ್ಮಿಸಿರುವ ಕಲಾಕೃತಿಗಾಗಿ ನೈಋತ್ಯ
ರೈಲ್ವೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. pic.twitter.com/pqCo8bJn1K— DD Chandana News (@DDChandanaNews) October 4, 2022
Such efforts are not only innovative and commendable but most importantly remind us of our basic civic duty of keeping our surroundings and public places clean. https://t.co/vyEE857mcH
— Narendra Modi (@narendramodi) October 3, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.