News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕಿಸ್ಥಾನದೊಂದಿಗೆ ಯಾವುದೇ ಮಾತುಕತೆ ಸಾಧ್ಯವಿಲ್ಲ: ಅಮಿತ್‌ ಶಾ

ನವದೆಹಲಿ: ಮೂರು ದಿನಗಳ ಕಾಲ ಜಮ್ಮು-ಕಾಶ್ಮೀರ ಭೇಟಿಯಲ್ಲಿದ್ದ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಪಾಕಿಸ್ಥಾನಕ್ಕೆ ಸ್ಪಷ್ಟವಾದ ಸಂದೇಶ ರವಾನಿಸಿದ್ದಾರೆ. ಪಾಕಿಸ್ಥಾನದೊಂದಿಗೆ ಯಾವುದೇ ಮಾತುಕತೆಯ ಸಂಭವನೀಯತೆಯನ್ನು ಅವರು ತಳ್ಳಿಹಾಕಿದ್ದಾರೆ.

ಬಾರಾಮುಲ್ಲಾದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಶಾ, ನರೇಂದ್ರ ಮೋದಿ ಸರ್ಕಾರವು ಈ ಪ್ರದೇಶದಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುತ್ತದೆ ಮತ್ತು ಪಾಕಿಸ್ಥಾನದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಪ್ರತಿಪಾದಿಸಿದರು.

ನಾವು ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ಮಾತನಾಡಲು ಬಯಸುತ್ತೇವೆಯೇ ಹೊರತು ಪಾಕಿಸ್ಥಾನದೊಂದಿಗೆ ಅಲ್ಲ ಎಂದು ಅವರು ಹೇಳಿದ್ದಾರೆ. ಕಳೆದ 70 ವರ್ಷಗಳಿಂದ ಕಾಶ್ಮೀರವನ್ನು ಆಳಿದವರು ಪಾಕಿಸ್ಥಾನದೊಂದಿಗೆ ಮಾತನಾಡುವಂತೆ ಸರ್ಕಾರಕ್ಕೆ ಸಲಹೆ ನೀಡುತ್ತಿದ್ದಾರೆ ಎಂದು ಶಾ ಪ್ರತಿಪಕ್ಷಗಳಿಗೆ ಟಾಂಕ್‌ ನೀಡಿದರು.

ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಂತರ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ ಸಂಪೂರ್ಣ ಪಾರದರ್ಶಕತೆಯೊಂದಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪ್ರಜಾಪ್ರಭುತ್ವವು ಮೂಲೆ ಮೂಲೆಗೂ ತಲುಪಿದೆ ಎಂದು ಗೃಹ ಸಚಿವರು ಪುನರುಚ್ಚರಿಸಿದರು.

ಶಾ ನಿನ್ನೆ ಶ್ರೀನಗರದಲ್ಲಿ ಸುಮಾರು 2,000 ಕೋಟಿ ರೂಪಾಯಿಗಳ 240 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.

ಅಲ್ಲದೇ ಬಾರಾಮುಲ್ಲಾದಲ್ಲಿ ಕೋಟ್ಯಂತರ ರೂಪಾಯಿಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top