News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಮಾಚಲ: ಐತಿಹಾಸಿಕ ಕುಲ್ಲು ದಸರಾದಲ್ಲಿ ಭಾಗಿಯಾದ ಮೋದಿ

ನವದೆಹಲಿ: ವಿಶ್ವಪ್ರಸಿದ್ಧ ಹಿಮಾಚಲ ಪ್ರದೇಶದ ಕುಲ್ಲು ದಸರಾ ಉತ್ಸವಕ್ಕೆ ಸುಮಾರು 400 ವರ್ಷಗಳ ಇತಿಹಾಸವಿದೆ. ಈ ಉತ್ಸವದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಈ ಮೂಲಕ ಕುಲ್ಲು ದಸರಾದಲ್ಲಿ ಭಾಗಿಯಾದ ಮೊದಲ ಪ್ರಧಾನಿ ಎನಿಸಿಕೊಂಡಿದ್ದಾರೆ.

ಕುಲು ಕಣಿವೆಯ ಪ್ರಧಾನ ದೇವತೆಯಾದ ಭಗವಾನ್ ರಘುನಾಥನಿಗೆ ನಮನ ಸಲ್ಲಿಸಿದ ಬಳಿಕ ಮೋದಿ ದಸರಾ ಸಂಭ್ರದಲ್ಲಿ ಭಾಗಿಯಾಗಿದ್ದಾರೆ.

ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಮತ್ತು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರೊಂದಿಗೆ ಕುಲ್ಲುವಿನ ಧಾಲ್ಪುರ್ ಮೈದಾನದಲ್ಲಿ ಪ್ರಧಾನಿ ಮೋದಿ ಅವರು ಸುಮಾರು 300 ದೇವತೆಗಳ  ‘ರಥಯಾತ್ರೆ’ಗೆ ಸಾಕ್ಷಿಯಾದರು.

“ಐತಿಹಾಸಿಕ ಕುಲು ದಸರಾದ ಭಾಗವಾಗಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಾಂಪ್ರದಾಯಿಕ ಹಿಮಾಚಲಿ ಟೋಪಿ ಧರಿಸಿದರು. ಈ ಸಂದರ್ಭದಲ್ಲಿ ಪ್ರಧಾನಿಯವರನ್ನು ಸ್ವಾಗತಿಸಲು ಅಪಾರ ಜನಸ್ತೋಮ ನೆರೆದಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top