ನವದೆಹಲಿ: 2001 ರಲ್ಲಿ ಅಕ್ಟೋಬರ್ 7 ರಂದು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇಂದಿಗೆ 21 ವರ್ಷವಾಗಿದೆ.
ಅವರು ಚುನಾಯಿತ ಜನಪ್ರತಿನಿಧಿಯಾಗಿ 21 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಳೆಯ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಅವರು ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದನ್ನು ಕಾಣಬಹುದು.
ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಾಗ ಅವರು ಶಾಸಕರೂ ಆಗಿರಲಿಲ್ಲ. ನಂತರ ಅವರು ರಾಜ್‌ಕೋಟ್ ಪಶ್ಚಿಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು.
ಕೇಶುಭಾಯ್ ಪಟೇಲ್ ಅವರ ರಾಜೀನಾಮೆಯ ನಂತರ ನರೇಂದ್ರ ಮೋದಿ ರಾಜ್ಯದ ಮುಖ್ಯಮಂತ್ರಿಯಾದರು. ಅನಾರೋಗ್ಯದ ಕಾರಣ ಕೇಶುಭಾಯ್ ರಾಜೀನಾಮೆ ನೀಡಿದ್ದರು.
ರಾಜ್ಯದಲ್ಲಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ನಂತರ, ಮೋದಿ 2014 ರಲ್ಲಿ ಭಾರತದ ಪ್ರಧಾನಿಯಾಗಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
26 ಮೇ 2014 ರಂದು ಪ್ರಮಾಣ ವಚನ ಸ್ವೀಕರಿಸಿದ ನಂತರ ನರೇಂದ್ರ ಮೋದಿ ಅವರು ಭಾರತದ 14 ನೇ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
There comes moment in history, which end up rewriting history!
This moment- 21 years ago-is one such moment as it laid foundation of transformation of India.
It was on this day, PM @narendramodi took oath as CM of Gujarat- an oath that he has kept, in both letter & spirit. pic.twitter.com/6TDYulYL7L
— Alok Bhatt (@alok_bhatt) October 7, 2022
#ThisDay, 21 years ago, seeds of a new destiny for India were sowed. It was on this day in 2001 that PM @narendramodi ji took oath as the CM of Gujarat.
The last 21 years of PM Modi in public service and as the head of a government has brought many positive changes in India. pic.twitter.com/RIPIiQ9d1R
— Dharmendra Pradhan (@dpradhanbjp) October 7, 2022
On this day, 21 years ago PM Shri @narendramodi ji began a journey of impeccable and selfless service towards the Nation.
Since taking charge as Gujarat’s CM in 2001, Shri Modi has been bringing a paradigm change in governance that is building a stronger & more confident India. pic.twitter.com/6olW61sHbJ
— Bhupender Yadav (@byadavbjp) October 7, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.