News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕುನೋ ಉದ್ಯಾನದಲ್ಲಿನ ಚೀತಾಗಳ ಮೇಲ್ವಿಚಾರಣೆಗೆ 9 ಸದಸ್ಯರ ಸಮಿತಿ ರಚನೆ

ನವದೆಹಲಿ: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನ ಮತ್ತು ಇತರ ಸೂಕ್ತ ಗೊತ್ತುಪಡಿಸಿದ ಪ್ರದೇಶಗಳಲ್ಲಿ ಚೀತಾ ಪರಿಚಯದ ಮೇಲ್ವಿಚಾರಣೆಗಾಗಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಒಂಬತ್ತು ಸದಸ್ಯರ ಕಾರ್ಯಪಡೆಯನ್ನು ರಚಿಸಿದೆ.

ಸಮಿತಿಯ ಸದಸ್ಯರು ಈ ಚೀತಾಗಳ ಪ್ರಗತಿ ಪರಿಶೀಲನೆ ಮತ್ತು ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವತ್ತ ಗಮನ ಹರಿಸುತ್ತಾರೆ ಎಂದು ಸಚಿವಾಲಯ ಹೇಳಿದೆ.

“ಚೀತಾಗಳನ್ನು ಬಿಡುಗಡೆ ಮಾಡುವ ಆವರಣಗಳ ನಿರ್ವಹಣೆ ಮತ್ತು ಸಂಪೂರ್ಣ ಪ್ರದೇಶದ ರಕ್ಷಣೆಯ ಸ್ಥಿತಿಯ ಪರಿಶೀಲನೆ ಮಾಡಲಾಗುತ್ತದೆ. ಅರಣ್ಯ ಮತ್ತು ಪಶುವೈದ್ಯಾಧಿಕಾರಿಗಳ ಪ್ರೋಟೋಕಾಲ್‌ಗಳ ಅನುಸರಣೆ ಮಾಡಲಾಗುತ್ತದೆ. ಮಧ್ಯಪ್ರದೇಶ ಅರಣ್ಯ ಇಲಾಖೆ ಮತ್ತು NTCA ಗೆ ಭಾರತದಲ್ಲಿ ಚೀತಾಗಳ ಪರಿಚಯದ ಕುರಿತು ಸಲಹೆಗಳನ್ನು ನೀಡಲಾಗುತ್ತದೆ. ಒಟ್ಟಾರೆ ಆರೋಗ್ಯ, ನಡವಳಿಕೆ ಮತ್ತು ಚೀತಾಗಳ ಸ್ಥಿತಿಗೆ ಸಂಬಂಧಿಸಿದಂತೆ ಕಾಳಜಿ ವಹಿಸಲಾಗುತ್ತದೆ” ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳನ್ನು ವೀಕ್ಷಿಸಲು ರಚಿಸಲಾದ ಕಾರ್ಯಪಡೆಯ ಶಿಫಾರಸಿನ ಆಧಾರದ ಮೇಲೆ, ಜನರು ಯಾವಾಗ ಇವುಗಳನ್ನು ನೋಡುತ್ತಾರೆ ಎಂಬುದನ್ನು ನಿರ್ಧರಿಸಲಾಗುವುದು ಎಂದು ಸೆಪ್ಟೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top