News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಿಎಫ್‌ಐ ಬ್ಯಾನ್:‌ UAPA ನ್ಯಾಯಮಂಡಳಿ ಅಧ್ಯಕ್ಷರಾಗಿ ನ್ಯಾ. ದಿನೇಶ್ ಕುಮಾರ್ ಶರ್ಮಾ ನೇಮಕ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ನ್ಯಾಯಮಂಡಳಿಯ ಅಧ್ಯಕ್ಷರಾಗಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲಿನ ನಿಷೇಧವನ್ನು ಪರಿಶೀಲಿಸಲು ಅಧ್ಯಕ್ಷರನ್ನು ನೇಮಿಸಲಾಗಿದೆ, ಕೇಂದ್ರವು ಇತ್ತೀಚೆಗೆ ಐದು ವರ್ಷಗಳ ಕಾಲ ಇವುಗಳನ್ನು ನಿಷೇಧ ಮಾಡಿದೆ.

ಈ ಸಂಬಂಧ ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, “ದಿಲ್ಲಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ಪಿಎಫ್‌ಐ ಬ್ಯಾನ್ ವಿಚಾರದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ನ್ಯಾಯಮಂಡಳಿಯ ಅಧ್ಯಕ್ಷರಾಗಿ ನೇಮಿಸಲು ನಾಮನಿರ್ದೇಶನ ಮಾಡಿದ್ದಾರೆ” ಎಂದು ತಿಳಿಸಲಾಗಿದೆ. ‌

ಫ್ರಂಟ್ ಆಫ್ ಇಂಡಿಯಾ (PFI) ಮತ್ತು ರೆಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIC) ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್ ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳ ಈ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘವೆಂದು ಘೋಷಿಸಲು ಸಾಕಷ್ಟು ಕಾರಣವಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಣಯಿಸುವ ಉದ್ದೇಶಕ್ಕಾಗಿ ಸಮಿತಿ ರಚನೆ ಮಾಡಲಾಗಿದೆ ಎಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top