News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎಎಪಿ ಪಕ್ಷದ ಸಚಿವನ ಹಿಂದೂ ವಿರೋಧಿ ಹೇಳಿಕೆಗೆ ವ್ಯಾಪಕ ಆಕ್ರೋಶ

ನವದೆಹಲಿ: ಆಮ್ ಆದ್ಮಿ ಪಕ್ಷದ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಹಿಂದೂ ವಿರೋಧಿ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. 10,000 ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಇನ್ನು ಮುಂದೆ ಹಿಂದೂ ದೇವರನ್ನು ಪೂಜಿಸುವುದಿಲ್ಲ ಎಂದಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಎಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಂದೂ ದೇವರುಗಳನ್ನು ಅವಮಾನಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಇತ್ತೀಚೆಗೆ ನಡೆದ ಸಾಮೂಹಿಕ ಮತಾಂತರ ಕೂಟದಲ್ಲಿ ಭಾಗವಹಿಸಿ”ಹಿಂದೂ ದೇವರು ಮತ್ತು ದೇವತೆಗಳನ್ನು ಪೂಜಿಸುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದ್ದಾರೆ, ಈ ಮೂಲಕ ಹಿಂದೂಗಳನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಅಕ್ಟೋಬರ್ 5 ರಂದು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ದೀಕ್ಷೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಯ ಅಂಬೇಡ್ಕರ್ ಭವನದಲ್ಲಿ  10,000 ಕ್ಕೂ ಹೆಚ್ಚು ಜನರು ಜಮಾಯಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು ನೀಡಿದ ಹೇಳಿಕೆ ಈಗ ವೈರಲ್‌ ಆಗಿದೆ. ದೆಹಲಿ ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಘಟನೆಯ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ.

ಕೇಜ್ರಿವಾಲ್ ಸರ್ಕಾರದ ಸಮಾಜ ಕಲ್ಯಾಣ ಸಚಿವ ಗೌತಮ್ ಅವರು ದಸರಾದಂದು ಕರೋಲ್ ಬಾಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಹಿಂದೂ ದೇವತೆಗಳಿಗೆ ಅಗೌರವ ತೋರಿಸಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಎಎಪಿ ಪಕ್ಷದ ನಿಜವಾದ ಹಿಂದೂ ವಿರೋಧಿ ಮುಖ ಬಯಲಾಗಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top