ಬೆಂಗಳೂರು: ಮೈಸೂರು – ಬೆಂಗಳೂರು ನಡುವಣ ಟಿಪ್ಪು ಎಕ್ಸ್‌ಪ್ರೆಸ್ ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಕರೆಯಲ್ಪಡಲಿದೆ. ಅದೇ ರೀತಿ ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಕುವೆಂಪು ಎಕ್ಸ್ ಪ್ರೆಸ್ ಎಂದು ಕರೆಯಲ್ಪಡಲಿದೆ.
ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ರೈಲ್ವೆ ಮಂಡಳಿ ಉಪ ನಿರ್ದೇಶಕ ರಾಜೇಶ್ ಕುಮಾರ್ ಅವರು ಆದೇಶ ಈ ಹೊರಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು, “ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ ಪ್ರೆಸ್” ಆಗಲಿದೆ” ಎಂದು ತಿಳಿಸಿದ್ದಾರೆ.
ಶುಕ್ರವಾರದ ಶುಭ ಸುದ್ದಿ!
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
— Pratap Simha (@mepratap) October 7, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.