ಮುಂಬೈ: ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರ ಸಮಾಜ ಸೇವೆಯನ್ನು ಗುರುತಿಸಿ ಸೇವಾ ಭಾರತಿ ಅವರಿಗೆ ‘ಸೇವಾ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಆದರೆ ರತನ್ ಟಾಟಾ ಅವರಿಗೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.
ರತನ್ ಟಾಟಾ ಅವರಲ್ಲದೆ, ಚಲಸಾನಿ ಬಾಬು ರಾಜೇಂದ್ರ ಪ್ರಸಾದ್ ಅವರಿಗೂ ಈ ಗೌರವವನ್ನು ನೀಡಲಾಗಿದೆ.
ಸಾಮಾಜಿಕ ಕಾರ್ಯಗಳಲ್ಲಿ ಅಮೂಲ್ಯ ಕೊಡುಗೆ ಅಥವಾ ಸಾಮಾಜಿಕ ಅಭಿವೃದ್ಧಿಗೆ ಹಣವನ್ನು ಒದಗಿಸಿದ ಗಣ್ಯರು ಮತ್ತು ಪ್ರತಿಷ್ಠಿತ ವ್ಯಕ್ತಿಗಳಿಗೆ ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
“ಉತ್ತರಾಖಂಡದ ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ) ಭಾಗವಹಿಸಿದ ಸಮಾರಂಭದಲ್ಲಿ ಇತರ 24 ಗಣ್ಯರು ಮತ್ತು ಸಂಸ್ಥೆಗಳಿಗೆ ಅವರ ನಿಸ್ವಾರ್ಥ ಸಾಮಾಜಿಕ ಸೇವೆಗಾಗಿ ಪ್ರಶಸ್ತಿ ನೀಡಲಾಗಿದೆ” ಎಂದು ಸೇವಾ ಭಾರತಿ ಹೇಳಿಕೆಯಲ್ಲಿ ತಿಳಿಸಿದೆ.
“ಸಾಮಾಜಿಕ ಕಾರ್ಯಗಳಲ್ಲಿ ಅಮೂಲ್ಯ ಕೊಡುಗೆ ಅಥವಾ ಸಾಮಾಜಿಕ ಅಭಿವೃದ್ಧಿಗೆ ನಿಧಿಯನ್ನು ಒದಗಿಸಿದ ಆಧಾರದ ಮೇಲೆ ಪ್ರತಿಷ್ಠಿತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗಿದೆ” ಎಂದು ಸೇವಾ ಭಾರತಿ ಪ್ರಕಟಣೆಯಲ್ಲಿ ತಿಳಿಸಿದೆ.
ರತನ್ ಟಾಟಾ ಅವರನ್ನು ಇತ್ತೀಚೆಗೆ ಪ್ರಧಾನ ಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿ (PM-CARES) ನ ಹೊಸ ಟ್ರಸ್ಟಿಗಳಲ್ಲಿ ಒಬ್ಬರಾಗಿ ನೇಮಕಗೊಂಡಿದ್ದಾರೆ.
@RNTata2000 awarded 'Sewa Ratna' by @RSSOrg-affiliate Sewa Bharti for philanthropy#RatanTata #RSS #SewaBharti pic.twitter.com/zYQkmuJOXo
— Mukund kumar pandey (@mukundRSS) October 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.