News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮತಾಂತರಗೊಂಡವರಿಗೆ ದಲಿತ ಸ್ಥಾನಮಾನದ ಬಗ್ಗೆ ಪರಿಶೀಲಿಸಲು ಸಮಿತಿ ರಚನೆ

ನವದೆಹಲಿ: ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಹೇಳಿಕೊಳ್ಳುವ, ಆದರೆ ಬೇರೆ ಧರ್ಮಕ್ಕೆ ಮತಾಂತರಗೊಂಡ  ಜನರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡುವ ವಿಷಯವನ್ನು ಪರಿಶೀಲಿಸಲು ಕೇಂದ್ರವು ಮಾಜಿ ಸಿಜೆಐ ಕೆ.ಜಿ.ಬಾಲಕೃಷ್ಣನ್ ನೇತೃತ್ವದ ಆಯೋಗವನ್ನು ನೇಮಿಸಿದೆ.

ಹಿಂದೂ ಧರ್ಮ ಅಥವಾ ಸಿಖ್ ಧರ್ಮ, ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ, 1950 (ತಿದ್ದುಪಡಿ) ಹೇಳುತ್ತದೆ.

ಆದರೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಗುಂಪುಗಳು ತಮ್ಮ ಮತಕ್ಕೆ ಮತಾಂತರಗೊಂಡ ದಲಿತರಿಗೆ ಇದೇ ರೀತಿಯ ಸ್ಥಾನಮಾನವನ್ನು ನೀಡುವಂತೆ ಒತ್ತಾಯಿಸುತ್ತಿವೆ. ಅವರ ಬೇಡಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ.

ಸಿಜೆಐ ಕೆ.ಜಿ.ಬಾಲಕೃಷ್ಣನ್ ನೇತೃತ್ವದ ಮೂವರು ಸದಸ್ಯರ ಆಯೋಗದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಡಾ.ರವೀಂದರ್ ಕುಮಾರ್ ಜೈನ್ ಮತ್ತು ಯುಜಿಸಿ ಸದಸ್ಯೆ ಪ್ರೊಫೆಸರ್ ಸುಷ್ಮಾ ಯಾದವ್ ಕೂಡ ಇದ್ದಾರೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಗುರುವಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ.

ಸಂವಿಧಾನದ 341ನೇ ಪರಿಚ್ಛೇದದ ಅಡಿಯಲ್ಲಿ ಕಾಲಕಾಲಕ್ಕೆ ಹೊರಡಿಸಲಾದ ರಾಷ್ಟ್ರಪತಿಗಳ ಆದೇಶಗಳನ್ನು ಹೊರತುಪಡಿಸಿ, ಐತಿಹಾಸಿಕವಾಗಿ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಹೇಳಿಕೊಳ್ಳುವ, ಆದರೆ ಬೇರೆ ಧರ್ಮಕ್ಕೆ ಮತಾಂತರಗೊಂಡ ಹೊಸ ವ್ಯಕ್ತಿಗಳಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡುವ ವಿಷಯವನ್ನು ಸಮಿತಿಯು ಪರಿಶೀಲಿಸುತ್ತದೆ.

ಈ ಜನರು ಇತರ ಧರ್ಮಗಳಿಗೆ ಮತಾಂತರಗೊಂಡ ನಂತರ, ಅಸ್ತಿತ್ವದಲ್ಲಿರುವ ಪರಿಶಿಷ್ಟ ಜಾತಿಗಳು, ಸಂಪ್ರದಾಯಗಳು, ಪದ್ಧತಿ ಮತ್ತು ಅವರ ಸಾಮಾಜಿಕ ತಾರತಮ್ಯ ಮತ್ತು ಅಭಾವದ ಸ್ಥಿತಿಯ ಬದಲಾವಣೆಗಳನ್ನು ಗಣನೆಗೆ ತೆಗೆದುಕೊಳ್ಳುವುದರ ಜೊತೆಗೆ, ನಿರ್ಧಾರದ ಪರಿಣಾಮಗಳನ್ನು ಸಮಿತಿಯು ಪರಿಶೀಲಿಸುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕೆ.ಜಿ.ಬಾಲಕೃಷ್ಣನ್ ಅವರು ಸುಪ್ರೀಂಕೋರ್ಟ್‌ನ ಮೊದಲ ದಲಿತ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಅವರು ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರೂ ಆಗಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top