ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರವು ಎಸ್.ಸಿ, ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದು ದಿಟ್ಟ ನಿರ್ಧಾರ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದರು.
ಎಸ್.ಸಿ, ಎಸ್.ಟಿ ಮೀಸಲಾತಿ ಸಂಬಂಧ ರಾಜ್ಯ ಬಿಜೆಪಿ ಸರಕಾರದ ನಿರ್ಧಾರವನ್ನು ಸ್ವಾಗತಿಸಿ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಏರ್ಪಡಿಸಿದ ಸಂಭ್ರಮಾಚರಣೆ ಸಂದರ್ಭದಲ್ಲಿ ಅವರು ಮಾತನಾಡಿದರು. ಸರ್ವಸ್ಪರ್ಶಿ ಸರ್ವವ್ಯಾಪಿ ಎಂಬಂತೆ ಬಸವರಾಜ ಬೊಮ್ಮಾಯಿ ಮತ್ತು ಅವರ ಸಂಪುಟವು ಈ ನಿರ್ಧಾರ ಮಾಡಿದೆ. ಈ ನಿರ್ಧಾರ ಮಾಡಿದ ಮುಖ್ಯಮಂತ್ರಿಗಳಿಗೆ ಶತ ಕೋಟಿ ನಮನಗಳು ಎಂದು ತಿಳಿಸಿದರು.
ಈ ನಿರ್ಧಾರವನ್ನು ಸ್ವಾಗತಿಸಿ ನಾಳೆ ವಾಲ್ಮೀಕಿ ಜಯಂತಿಯನ್ನು ವಿಜಯೋತ್ಸವದ ರೀತಿಯಲ್ಲಿ ಆಚರಿಸಬೇಕು. ತನ್ಮೂಲಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಎಸ್.ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ನರಸಿಂಹ ನಾಯಕ್ ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.