News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ: ಮೋದಿ

ಅಹ್ಮದಾಬಾದ್: ಗುಜರಾತಿನ ಅಹಮದಾಬಾದ್‌ ಕನ್ನಡ ಸಂಘ 75ನೇ ವಾರ್ಷಿಕೋತ್ಸವವನ್ನು ಆಚರಣೆ ಮಾಡಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲೇ ಟ್ವಿಟ್‌ ಮಾಡಿರುವ ಮೋದಿ, ” ಏಕ ಭಾರತ್, ಶ್ರೇಷ್ಠ ಭಾರತ್. ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ. ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ” ಎಂದಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಟ್ವಿಟ್‌ಗೆ ಪ್ರತಿಕ್ರಿಯೆಯಾಗಿ ಮೋದಿ ಈ ಟ್ವಿಟ್‌ ಮಾಡಿದ್ದಾರೆ.

“ಇಂದು ಗುಜರಾತನ ಅಹಮದಾಬಾದ್‌ನಲ್ಲಿ ನಡೆದ ಕನ್ನಡ ಸಂಘದ 75ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಅತ್ಯಂತ ಸಂತಸದಿಂದ ಪಾಲ್ಗೊಂಡು, ನೆರೆದಿದ್ದ ಗುಜರಾತಿನ ಕನ್ನಡಿಗರೊಂದಿಗೆ ಎರಡು ರಾಜ್ಯಗಳು ಹೊಂದಿರುವ ವಿಶೇಷ ಬಾಂಧವ್ಯದ ಕುರಿತು ನನ್ನ ವಿಚಾರಗಳನ್ನು ಹಂಚಿಕೊಂಡೆ” ಎಂದು ಜೋಶಿ ನಿನ್ನೆ ಟ್ವಿಟ್‌ ಮಾಡಿದ್ದಾರೆ

ಅಹಮದಾಬಾದ್‌ನಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಸ್ಥಳ ನೀಡುವಂತೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೋರಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top