ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ರಾಜೇಂದ್ರ ಪಾಲ್ ಗೌತಮ್ ಅವರು ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ದೊಡ್ಡ ಮಟ್ಟದಲ್ಲಿ ಟೀಕೆಗಳನ್ನು ಎದುರಿಸಿದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದೆಹಲಿಯಲ್ಲಿ ಅಕ್ಟೋಬರ್ 5 ರಂದು ಆಯೋಜಿಸಲಾದ ಕಾರ್ಯಕ್ರಮದ ವೀಡಿಯೊದಲ್ಲಿ ದೆಹಲಿಯ ಸಮಾಜ ಕಲ್ಯಾಣ ಸಚಿವ ಗೌತಮ್ ಅವರನ್ನು ಒಳಗೊಂಡ ಭಾರೀ ವಿವಾದವನ್ನು ಹುಟ್ಟುಹಾಕಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರನ್ನುಅವಮಾನಿಸಿದ ಗೌತಮ್ ಅವರನ್ನು ಬಿಜೆಪಿ ತೀವ್ರವಾಗಿ ಟೀಕಿಸಿತ್ತು ಮತ್ತು ಕೇಜ್ರಿವಾಲ್ ಸರ್ಕಾರಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿತು. ಗೌತಮ್ ಮತ್ತು ಆಮ್ ಆದ್ಮಿ ಪಕ್ಷವು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತಿದೆ ಮತ್ತು ದೇಶದಲ್ಲಿ ಕೋಮುಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.
ಆದರೆ ವಿವಾದದ ನಂತರ, ಗೌತಮ್ ಅವರು ಸ್ಪಷ್ಟೀಕರಣವನ್ನು ನೀಡಿ ವೈಯಕ್ತಿಕವಾಗಿ ಎಲ್ಲಾ ದೇವತೆಗಳನ್ನು ಗೌರವಿಸುತ್ತೇನೆ ಮತ್ತು ಅವರನ್ನು ಅವಮಾನಿಸುವ ಕನಸು ಕೂಡ ಇಲ್ಲ ಎಂದು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.