News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ ವಿಧಿವಿಜ್ಞಾನ ಪ್ರಯೋಗಾಲಯ

ಬೆಂಗಳೂರು: ಕರ್ನಾಟಕದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ  ಸ್ಥಾಪನೆ ಆಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಧಿವಿಜ್ಞಾನ ಪ್ರಯೋಗಾಲಯವನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಕೇಂದ್ರದಿಂದ ಪತ್ರ ಬರೆದಿದೆ. ಹುಬ್ಬಳ್ಳಿ, ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಜಾಗ ಗುರುತಿಸುವ ಪ್ರಯತ್ನಗಳು ನಡೆದಿದೆ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಬಗ್ಗೆ ಮಾತನಾಡಿದ ಅವರು, ಈ ಯಾತ್ರೆಯಿಂದ ಬಿಜೆಪಿಗೆ ಏನೂ ನಷ್ಟವಿಲ್ಲ. ಉತ್ತರ ಭಾರತದಲ್ಲಿ ನೆಲೆಕಳೆದುಕೊಂಡಿರುವ ಕಾಂಗ್ರೆಸ್‌ ಇಲ್ಲಿ ತನ್ನ ಅಸ್ತಿತ್ವಕ್ಕೆ ಹುಡುಕಾಡುತ್ತಿದೆ ಎಂದಿದ್ದಾರೆ.

ಭೂತಾನ್​ನಿಂದ ಹಸಿ ಅಡಿಕೆ ಆಮದಿಗೆ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ ನಿರ್ಧಾರದ ಬಗ್ಗ ಮಾತನಾಡಿದ ಅವರು, ಈ ನಿರ್ಧಾರ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಭೂತಾನ್​ಗೆ ಅಡಕೆ ಉತ್ಪನ್ನಗಳು ಆಮದಿಗಿಂತ ಹೆಚ್ಚು ರಫ್ತು ಆಗುತ್ತಿದೆ. ಭೂತಾನ್​ನಿಂದ ಕೇವಲ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಮಾತ್ರವೇ ಅನುಮತಿ ನೀಡಲಾಗಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top