News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡಿವೈ ಚಂದ್ರಚೂಡ್ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ

ನವದೆಹಲಿ:  ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಸುಪ್ರೀಂಕೋರ್ಟ್‌ನ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ.

ನವೆಂಬರ್ 8 ರಂದು ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಲಲಿತ್ ಅವರು ನ್ಯಾಯಮೂರ್ತಿ ಚಂದ್ರಚೂಡ್ ಅವರಿಗೆ ಶಿಫಾರಸು ಪತ್ರವನ್ನು ಹಸ್ತಾಂತರಿಸಿದ್ದಾರೆ.

ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಕೇಂದ್ರ ಕಾನೂನು ಸಚಿವಾಲಯವು ಕಳೆದ ಶುಕ್ರವಾರ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿತ್ತು. ಸಚಿವಾಲಯವು ಅದರ ಬಗ್ಗೆ ಟ್ವೀಟ್ ಕೂಡ ಮಾಡಿತ್ತು.

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾಯಮೂರ್ತಿ ಚಂದ್ರಚೂಡ್ ಅವರು ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ಅವರು ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ.

ಚಂದ್ರಚೂಡ್ ಅವರು ಸೇಂಟ್ ಸ್ಟೀಫನ್ಸ್ ಕಾಲೇಜ್‍ನಿಂದ ಅರ್ಥಶಾಸ್ತ್ರದಲ್ಲಿ ಬಿ.ಎ. ಆನರ್ಸ್, ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‌ನಿಂದ ಎಲ್.ಎಲ್.ಬಿ. ಪದವಿ ಮತ್ತು ಯು.ಎಸ್.ಎ.ಯ ಹಾರ್ವರ್ಡ್ ಲಾ ಸ್ಕೂಲ್‍ನಿಂದ ಎಲ್.ಎಲ್.ಎಂ. ಮತ್ತು ಎಸ್.ಜೆ.ಡಿ. ಪದವಿ ಪಡೆದಿದ್ದಾರೆ. ಬಾರ್ ಕೌನ್ಸಿಲ್ ಆಫ್ ಮಹಾರಾಷ್ಟ್ರದಲ್ಲಿ ನೋಂದಣಿ ಮತ್ತು ಮುಖ್ಯವಾಗಿ ಬಾಂಬೆ ಉಚ್ಛ ನ್ಯಾಯಾಲಯದಲ್ಲಿ ಮತ್ತು ಭಾರತದ ಸವೋಚ್ಛ ನ್ಯಾಯಾಲಯದಲ್ಲಿ ವಕೀಲ ವೃತ್ತಿ ನಡೆಸಿದ್ದಾರೆ. 1998ರಲ್ಲಿ ಭಾರತದ ಹಿರಿಯ ವಕೀಲ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನಿಯೋಜನೆಗೊಂಡರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top