News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಲೋಕನಾಯಕ ಜಯಪ್ರಕಾಶ್ ನಾರಾಯಣ್‌ ಪ್ರತಿಮೆ ಉದ್ಘಾಟಿಸಿದ ಅಮಿತ್‌ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಧ್ಯಾಹ್ನ ಬಿಹಾರದ ಸರನ್ ಜಿಲ್ಲೆಯ ಸಿತಾಬ್ದಿಯಾರಾಕ್ಕೆ ಆಗಮಿಸಿದರು ಮತ್ತು ಸಮಾಜವಾದಿಯ ಮೇರು ವ್ಯಕ್ತಿತ್ವ ಜಯಪ್ರಕಾಶ್ ನಾರಾಯಣ್ ಅವರ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು.

ಇಂದು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ 120ನೇ ಜನ್ಮದಿನವನ್ನು ಆಚರಣೆ ಮಾಡಲಾಗುತ್ತಿದೆ.

ಬಿಹಾರ ಮತ್ತು ಉತ್ತರ ಪ್ರದೇಶದ ಗಡಿಯಲ್ಲಿ ನೆಲೆಗೊಂಡಿರುವ ಸಿತಾಬ್ ಡಿಯಾರಾ ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪೂರ್ವಜರ ಗ್ರಾಮವಾಗಿದೆ.

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮಸ್ಥಳದಲ್ಲಿನ ಜೆಪಿ ಸ್ಮಾರಕ ಭವನದಲ್ಲಿ 14 ಅಡಿ ಎತ್ತರದ ಪ್ರತಿಮೆಯನ್ನು  ಶಾ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ನಿತ್ಯಾನಂದ ರಾಯ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

 ಅಮಿತ್ ಶಾ ಇಂದು ಬಿಹಾರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top