News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರುಪೇ ಬಗ್ಗೆ ಆಸಕ್ತಿ ತೋರಿಸುತ್ತಿವೆ ಸಿಂಗಾಪುರ, ಯುಎಇ

ನವದೆಹಲಿ: ರುಪೇ ಪಾವತಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಭಾರತ ವಿವಿಧ ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಿಂಗಾಪುರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ರುಪೇಯಲ್ಲಿ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿವೆ ಎಂದು ಅವರು ತಿಳಿಸಿದ್ದಾರೆ.

ವಾಷಿಂಗ್ಟನ್‌ನಲ್ಲಿ ಪ್ರಮುಖ ಚಿಂತಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಣಕಾಸು ಸಚಿವರು ಈ ಬಗ್ಗೆ ಹೇಳಿದ್ದಾರೆ.

UPI, BHIM ಅಪ್ಲಿಕೇಶನ್ ಮತ್ತು NCPI (ಭಾರತೀಯ ರಾಷ್ಟ್ರೀಯ ಪಾವತಿಗಳ ನಿಗಮ)ಗಳನ್ನು ಈಗ ಇತರ ದೇಶಗಳಲ್ಲಿನ ಸಿಸ್ಟಮ್‌ಗಳೊಂದಿಗೆ ಸಿಂಕ್ರೊನೈಸ್ ಮಾಡಲು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು  ಸೀತಾರಾಮನ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಮತ್ತು ವಿಶ್ವಬ್ಯಾಂಕ್‌ನ ವಾರ್ಷಿಕ ಸಭೆಗಳಿಗಾಗಿ ಹಣಕಾಸು ಸಚಿವರು ವಾಷಿಂಗ್ಟನ್‌ ಪ್ರವಾಸದಲ್ಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top