News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನವೆಂಬರ್ 14ರಿಂದ ಹುಬ್ಬಳ್ಳಿ-ದೆಹಲಿ ನಡುವೆ ನಿತ್ಯ ವಿಮಾನ ಸೇವೆ

ಬೆಂಗಳೂರು: ನವೆಂಬರ್ 14ರಿಂದ ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ದೆಹಲಿಯ ನಡುವೆ ನಿತ್ಯ ವಿಮಾನ ಸೇವೆ ಆರಂಭವಾಗಲಿದೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದು, “ಹುಬ್ಬಳ್ಳಿ ಮತ್ತು ದೆಹಲಿ ನಡುವೆ ನವೆಂಬರ್ 14 ರಿಂದ ನಿತ್ಯ ವಿಮಾನ ಸೇವೆ ಆರಂಭವಾಗಲಿದೆ. ಈ ಬಗ್ಗೆ ಇಂಡಿಗೋ ವಿಮಾನಯಾನ ಸಂಸ್ಥೆಯ ಅಧಿಕಾರಿಗಳೊಂದಿಗೆ ಮಾತುಕತೆಯನ್ನು ನಡೆಸಲಾಗಿದೆ” ಎಂದಿದ್ದಾರೆ.

ಈ ವಿಮಾನ ಸೇವೆ ಆರಂಭವಾದ ಬಳಿಕ ದೆಹಲಿ-ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ-ದೆಹಲಿ ನಡುವೆ ಉತ್ತರ ಕರ್ನಾಟಕದ ಪ್ರಯಾಣಿಕರು ನಿತ್ಯ ಪ್ರಯಾಣಿಸಬಹುದು ಎಂದಿದ್ದಾರೆ.

ವಿಮಾನ ಸಂಖ್ಯೆ 6ಇ 5625 ಬೆಳಗ್ಗೆ 10 ಗಂಟೆಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 12:45ಕ್ಕೆ ಹುಬ್ಬಳ್ಳಿಯನ್ನು ತಲುಪುತ್ತದೆ. ಮರುದಿನ ಮಧ್ಯಾಹ್ನ 1.15ಕ್ಕೆ ಹುಬ್ಬಳ್ಳಿಯಿಂದ ಹೊರಟು 3.45ಕ್ಕೆ ದೆಹಲಿಯನ್ನು ತಲುಪುತ್ತದೆ. ಈಗಾಗಲೇ ಇಂಡಿಗೋ ಸಂಸ್ಥೆಯ ಟಿಕೆಟ್ ಬುಕಿಂಗ್ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಈ ವಿಮಾನ ಸೌಲಭ್ಯ ಕಲ್ಪಿಸಲಾಗಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top