News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆಯಿಂದ ತ್ರಿವೇಣಿ ಸಂಗಮದ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳ: ಯೋಗಿ ಭಾಗಿ

ಮೈಸೂರು: ಅಕ್ಟೋಬರ್ 13 ರಿಂದ 16 ವರೆಗೆ ಕೆ.ಆರ್. ಪೇಟೆ ತಾಲೂಕಿನ ತ್ರಿವೇಣಿ ಸಂಗಮದ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳ ಜರಗುತ್ತಿದೆ. ಬರೋಬ್ಬರಿ ಒಂಬತ್ತು ವರ್ಷಗಳ ನಂತರ ನಡೆಯಲಿರುವ ಈ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಕುಂಭಮೇಳಕ್ಕೆ ಆಗಮಿಸಲಿದ್ದಾರೆ ಎಂದು ಸುತ್ತೂರು ಶ್ರೀಗಳು ಮಾಹಿತಿ ನೀಡಿದ್ದಾರೆ.

ಕುಂಭಮೇಳದಲ್ಲಿ ಅ.16 ರಂದು ನಡೆಯುವ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.

“ಯೋಗಿ ಆದಿತ್ಯನಾಥ ಸೇರಿದಂತೆ ದೇಶಾದ್ಯಂತ ಸಾಧು-ಸಂತರು ಮೇಳದಲ್ಲಿ ಭಾಗವಹಿಸಲಿದ್ದಾರೆ ಅ. 13 ರಿಂದ 16 ರವರೆಗೆ ಕೆ.ಆರ್. ಪೇಟೆ ತಾಲೂಕಿನ ಅಂಬಿಗರ ಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ಆಯೋಜಿಸಲಾಗಿದೆ. 2013ರಲ್ಲಿ ಆಯೋಜಿಸಲಾಗಿದ್ದ ಕುಂಭಮೇಳ ಯಶಸ್ವಿಯಾಗಿತ್ತು. ಈಗ ಒಂಬತ್ತು ವರ್ಷಗಳ ನಂತರ ಮತ್ತೆ ಕುಂಭಮೇಳ ನಡೆಯಲಿದೆ. ನಾಳೆಯಿಂದ ವಿಶೇಷ ಪೂಜೆ ಇರಲಿವೆ. ತ್ರಿನೇತ್ರ ಸ್ವಾಮಿ ಸಾನಿಧ್ಯದಲ್ಲಿ ವಿಧಿವಿಧಾನಗಳು ಜರುಗಲಿವೆ. ಮಹದೇಶ್ವರ ಮೂರ್ತಿ ಸ್ಥಾಪನೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ” ಎಂದಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ್ದು,”9 ವರ್ಷಗಳ ನಂತರ ಕುಂಭಮೇಳ ನಡೆಯುತ್ತಿದೆ, 5 ರಿಂದ 6 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಕುಂಭಮೇಳಕ್ಕಾಗಿ ಹೆಚ್ಚುವರಿ ಬಸ್ ಓಡಿಸಲಾಗುವುದು. ಭೂ ವರಾಹಸ್ವಾಮಿ ದೇವಸ್ಥಾನಕ್ಕೆ ಬೋಟ್ ವ್ಯವಸ್ಥೆ ಕೂಡ ಮಾಡಿದ್ದೇವೆ. ವಿವಿಧ ಕಾರ್ಯಕ್ರಮಗಳು ನಡೆಯಲಿವೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top