News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 9th December 2023


×
Home About Us Advertise With s Contact Us

ಹಾವೇರಿಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತನ ಮೇಲೆ ಹಲ್ಲೆ: 20 ಮಂದಿ ಬಂಧನ

ಹಾವೇರಿ: ಮಂಗಳವಾರ ರಾತ್ರಿ ಕರ್ನಾಟಕದ ಹಾವೇರಿ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನ ಮೇಲೆ 20 ಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಂಘಟನೆಯಾದ ಅಂಜುಮನ್-ಐ-ಇಸ್ಲಾಂನ ಅಧ್ಯಕ್ಷ ಸೇರಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

ಹಾವೇರಿ ಜಿಲ್ಲೆಯ ರಟ್ಟೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಕಾರ್ಯಕರ್ತ ಗ್ರಾಮದಲ್ಲಿ ಪಥ ಸಂಚಲನ ಕಾರ್ಯಕ್ಕೆ ಹಾಜರಾಗಿದ್ದರು. ಈ ವೇಳೆ ಅನ್ಯಕೋಮಿನ ಜನರ ಗುಂಪು ವಿನಾ ಕಾರಣ ತಗಾದೆ ತೆಗೆದು ಹಲ್ಲೆ ನಡೆಸಿದೆ.

ಈ ಪ್ರಕರಣದಲ್ಲಿ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top