News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

10,000 ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸುತ್ತಿದೆ ಕೇಂದ್ರ

ನವದೆಹಲಿ: ಕೇಂದ್ರ ಮತ್ತು ರಾಜ್ಯಗಳ ಜಂಟಿ ಪ್ರಯತ್ನದಿಂದ, ಸಾಂಕ್ರಾಮಿಕ ರೋಗದ  ಸಮಯದಲ್ಲಿಯೂ ಸರ್ಕಾರವು 3 ಲಕ್ಷ 75 ಸಾವಿರ ಕೋಟಿ ರೂಪಾಯಿ ಮೌಲ್ಯದ ಕೃಷಿ ಉತ್ಪನ್ನವನ್ನು ರಫ್ತು ಮಾಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ತೋಮರ್ ಹೇಳಿದ್ದಾರೆ.

ಅವರು ಕೃಷಿ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡಲು ಇತ್ತೀಚಿನ ತಂತ್ರಜ್ಞಾನ ಮತ್ತು ಸಾಂಪ್ರದಾಯಿಕ ಕೃಷಿ ವಿಧಾನಗಳೊಂದಿಗೆ ನಾವೀನ್ಯತೆಯ ಸಂಯೋಜನೆಯ ಅಗತ್ಯವನ್ನು ಒತ್ತಿ ಹೇಳಿದರು.

ಅವರು ಬುಧವಾರ ನವದೆಹಲಿಯಲ್ಲಿ ”ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು: ಸುಧಾರಿತ ಬೀಜಗಳು ಮತ್ತು ಕೃಷಿ ಇನ್‌ಪುಟ್‌ಗಳ ಏಕೀಕರಣ” ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.

ಕೃಷಿ ಮೂಲಸೌಕರ್ಯದ ಪಾತ್ರವನ್ನು ಎತ್ತಿ ತೋರಿಸಿದ ಅವರು, ದೇಶಾದ್ಯಂತ ಕೃಷಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಸರ್ಕಾರವು  6,800 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹತ್ತು ಸಾವಿರ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸುತ್ತಿದೆ ಎಂದು ಹೇಳಿದರು. ದೇಶದ ರೈತರ ಉತ್ಪಾದಕತೆಯನ್ನು ಹೆಚ್ಚಿಸಲು ಸರ್ಕಾರ ಹಲವಾರು ಕ್ರಮಗಳನ್ನು ನಿರಂತರವಾಗಿ ಮಾಡುತ್ತಿದೆ ಎಂದು ಅವರು ಹೇಳಿದರು.

ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಅಡಿಯಲ್ಲಿ ಸರ್ಕಾರವು ಬೆಳೆ ಉತ್ಪಾದಕತೆಯ ಅನಿಶ್ಚಿತತೆಯನ್ನು ಹೋಗಲಾಡಿಸಲು ಉಪಗ್ರಹ ಮೌಲ್ಯಮಾಪನದ ಮೂಲಕ ಕ್ರಾಪ್ ಮ್ಯಾಪಿಂಗ್ ಮಾಡುವ ಕೆಲಸ ಮಾಡುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ರಾಷ್ಟ್ರೀಯ ಸಮ್ಮೇಳನವನ್ನು ASSOCHAM ಆಯೋಜಿಸಿದೆ. ಇದರಲ್ಲಿ ಪ್ರಖ್ಯಾತ ಕೃಷಿ ತಜ್ಞರು, ವೃತ್ತಿಪರರು ಮತ್ತು ಶಿಕ್ಷಣತಜ್ಞರು ಭಾಗವಹಿಸಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top