News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಜಾಬ್‌ ವಿವಾದ: ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ

ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ಇಂದು ವಿಭಿನ್ನ ತೀರ್ಪು ನೀಡಿದ್ದು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೇಮಂತ್ ಗುಪ್ತ  ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ಅವರು ವಜಾ ಮಾಡಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದಾರೆ. ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ  ವರ್ಗಾವಣೆ ಮಾಡಲಾಗಿದೆ.

ಪ್ರಕರಣದ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮುಂದಿನ ದಿನಗಳಲ್ಲಿ ವಿಸ್ತೃತ ನ್ಯಾಯಪೀಠ  ರಚಿಸುವ ಸಾಧ್ಯತೆಯಿದೆ. ಪ್ರಕರಣವನ್ನು ಮತ್ತೊಮ್ಮೆ  ಪರಿಶೀಲಿಸಿದ ನಂತರ ವಿಸ್ತೃತ ನ್ಯಾಯಪೀಠವು ತನ್ನ ತೀರ್ಪು ನೀಡಲಿದೆ ಎನ್ನಲಾಗಿದೆ.

ವಿಸ್ತೃತ ನ್ಯಾಯಪೀಠ ರಚಿಸುವುದು ಮತ್ತು ವಿಚಾರಣೆಯ ಸ್ವರೂಪವನ್ನು ನಿರ್ಧರಿಸುವುದು ಮುಖ್ಯ ನ್ಯಾಯಮೂರ್ತಿ ವಿವೇಚನೆಗೆ ಬಿಟ್ಟ ವಿಚಾರವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top