News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉಗ್ರರ ಗುಂಡೇಟಿನಿಂದ ಗಾಯಗೊಂಡಿದ್ದ ಸೇನಾ ಶ್ವಾನ ʼಜೂಮ್ʼ ನಿಧನ


ನವದೆಹಲಿ
: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಉಗ್ರ ವಿರೋಧಿ ಕಾರ್ಯಾಚರಣೆಯ ವೇಳೆ ಎರಡು ಗುಂಡೇಟು ತಗುಲಿ ಗಾಯಗೊಂಡಿದ್ದ ಸೇನೆಯ ಶ್ವಾನ ಜೂಮ್ ಗುರುವಾರ ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದೆ.

ಜೂಮ್  ಅಡ್ವಾನ್ಸ್ ಫೀಲ್ಡ್ ವೆಟರ್ನರಿ ಆಸ್ಪತ್ರೆಯಲ್ಲಿ ಮಧ್ಯಾಹ್ನ 12 ರ ಸುಮಾರಿಗೆ ನಿಧನ ಹೊಂದಿತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ” 11.45 ರ ಸುಮಾರಿಗೆ ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸಿದ, ಆದರೆ ಬಳಿಕ ಇದ್ದಕ್ಕಿದ್ದಂತೆ ಉಸಿರುಗಟ್ಟಲು ಪ್ರಾರಂಭಿಸಿ ಕುಸಿದು ಬಿದ್ದ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಭಾನುವಾರ ರಾತ್ರಿ ಅನಂತನಾಗ್ ಜಿಲ್ಲೆಯ ತಂಗ್ಪಾವಾ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಜೂಮ್‌ ಭಾಗಿಯಾಗಿತ್ತು. ಉಗ್ರರು ಅಡಗಿದ್ದ ಮನೆಯೊಳಗೆ ಸೋಮವಾರ ಬೆಳಗ್ಗೆ ಜೂಮ್ ಅನ್ನು ಕಳುಹಿಸಲಾಗಿತ್ತು. ಈ ವೇಳೆ ಉಗ್ರರು ಶ್ವಾನದ ಮೇಲೆ ಗುಂಡು ಹಾರಿಸಿದ್ದಾರೆ. ಎರಡು ಗುಂಡು ತಗಲಿದರು ಜೂಮ್‌ ಎದೆಗುಂದದೆ ಉಗ್ರನನ್ನು ಕೆಳಕ್ಕುರುಳಿಸಿದೆ. ಬಳಿಕ ಉಗ್ರನನ್ನು ಹತ್ಯೆ ಮಾಡಲಾಗಿದೆ.

 ಅಸಾಧಾರಣ ಶೌರ್ಯ ಪ್ರದರ್ಶಿಸಿ ಇಂದು ಅಗಲಿದ ಜೂಮ್‌ಗಾಗಿ ಎಲ್ಲೆಡೆ ಕಂಬನಿ ಮಿಡಿಯಲಾಗುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top