ಬೆಂಗಳೂರು: ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್ – ಸೆಮಿ ಹೈಸ್ಪೀಡ್ ರೈಲಿನ ಸೇವೆಗಳನ್ನು ನವೆಂಬರ್ 10 ರಂದು ಪ್ರಾರಂಭಿಸಲಾಗುತ್ತಿದೆ. ವರದಿಗಳ ಪ್ರಕಾರ, ರೈಲು ಚೆನ್ನೈ-ಬೆಂಗಳೂರು ಮತ್ತು ಮೈಸೂರು ನಡುವೆ ಸುಮಾರು 483 ಕಿ.ಮೀ ಸಂಚರಿಸಲಿದೆ.
ಸೆಮಿ ಹೈಸ್ಪೀಡ್ ರೈಲು ಮುಂದಿನ ನವೆಂಬರ್ 10 ರಂದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗಗಳಲ್ಲಿ ಸಂಚರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿಗೆ ನವೆಂಬರ್ 10 ರಂದು ಚಾಲನೆ ನೀಡಲಿದ್ದಾರೆ. ಈ ಮೂಲಕ ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳು ಹಾಗೂ ರಾಜ್ಯದ ಸಾಂಸ್ಕೃತಿಕ ನಗರವನ್ನು ಈ ರೈಲು ಸಂಪರ್ಕಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗಳಿಗೆ ಚಾಲನೆ ನೀಡಿದರು.
The 5th Vande Bharat Train will be launched on 10th November 2022. The train will run on Chennai- Bengaluru- Mysuru route. Thank you beloved PM @narendramodi ji n RM @AshwiniVaishnaw ji. pic.twitter.com/ztwnlKRVda
— Pratap Simha (@mepratap) October 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.