News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಲೆ ಮಹದೇಶ್ವರ ಮಹಾ ಕುಂಭಮೇಳಕ್ಕೆ ವೀರೇಂದ್ರ ಹೆಗ್ಗಡೆ ಚಾಲನೆ

ಬೆಂಗಳೂರು: ಶ್ರೀ ಶ್ರೀ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರು ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರು ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು,ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕೆ.ಗೋಪಾಲಯ್ಯ, ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡೆ ಸಚಿವರಾದ ಡಾ. ನಾರಾಯಣಗೌಡ,ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್,ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ.ಜೊಲ್ಲೆ,ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪ,ಸಣ್ಣ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕುಂಭ ಮೇಳದಲ್ಲಿ ಮಲೆ ಮಹದೇಶ್ವರ ಜಯಂತಿ, ಮಂಡ್ಯ ಜಿಲ್ಲಾ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕುಂಭಮೇಳದ ಹಿನ್ನಲೆಯಲ್ಲಿ ಕೆ.ಆರ್.ಪೇಟೆ ಪಟ್ಟಣಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿರುವ 3 ಜ್ಯೋತಿಗಳು ನಿನ್ನೆ ತ್ರೀವೇಣಿ ಸಂಗಮದಲ್ಲಿ ಸೇರಿವೆ. ಇಂದು ಬೆಳಗ್ಗೆ 5ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ದೇವಾಲಯ ಪ್ರವೇಶ, ಭಗವಾಧ್ವಜ ಸ್ಥಾಪನೆ, ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top