News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕ ಹೈಕೋರ್ಟ್​ ನೂತನ ಸಿಜೆಯಾಗಿ ನ್ಯಾ.ವರಾಲೆ ಪ್ರಮಾಣವಚನ

ಬೆಂಗಳೂರು: ಕರ್ನಾಟಕ ಹೈಕೋರ್ಟ್​ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪಿಬಿ ವರಾಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಸೆಪ್ಟೆಂಬರ್‌ 28ರಂದು ನಡೆದ ಸುಪ್ರೀಂಕೋರ್ಟ್‌ ಕೊಲ್ಜಿಯಂ ಸಭೆಯಲ್ಲಿ ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಸಿಜೆಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿತ್ತು.

ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದಾರೆ.  ಆರಂಭದಲ್ಲಿ ವಕೀಲರಾದ ಎಸ್‌ ಎನ್‌ ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ವರಾಲೆ ಅಭ್ಯಾಸ ಆರಂಭಿಸಿದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್‌ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಲ್ಲಿ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top