News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ವಿತರಣೆ: ಕರ್ನಾಟಕಕ್ಕೆ 6 ಸ್ಥಾನ

ನವದೆಹಲಿ: 2022 ರ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯದ ವಿತರಣೆಯಲ್ಲಿ ಬಿಜೆಪಿ ಆಡಳಿತವಿರುವ ಹರಿಯಾಣವು ಅಗ್ರಸ್ಥಾನದಲ್ಲಿದ್ದರೆ,  ಕರ್ನಾಟಕವು 18 ದೊಡ್ಡ ರಾಜ್ಯಗಳ ಪೈಕಿ ಆರನೇ ಸ್ಥಾನವನ್ನು ಪಡೆದುಕೊಂಡಿದೆ.

ಭಾರತದಲ್ಲಿ ರಾಜ್ಯಗಳಲ್ಲಿ ಆಡಳಿತದ ಕುರಿತು ಬೆಂಗಳೂರು ಮೂಲದ ಸಾರ್ವಜನಿಕ ವ್ಯವಹಾರಗಳ ಕೇಂದ್ರ (PAC) ಹೊರತಂದಿರುವ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಏಳನೇ ಆವೃತ್ತಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. 0.6948 ಅಂಕಗಳೊಂದಿಗೆ ಹರಿಯಾಣ ಮೂರು ವಿಧದ ನ್ಯಾಯಗಳಲ್ಲಿ ಅಗ್ರಸ್ಥಾನದಲ್ಲಿದೆ. ತಮಿಳುನಾಡು, ಕೇರಳ, ಛತ್ತೀಸ್ಗಢ, ಪಂಜಾಬ್ ಮತ್ತು ಕರ್ನಾಟಕ ನಂತರದ ಸ್ಥಾನದಲ್ಲಿದೆ.

2021ರಲ್ಲಿ ಏಳನೇ ಸ್ಥಾನ ಪಡೆದಿದ್ದ ಕರ್ನಾಟಕ 2022ರಲ್ಲಿ 0.6216 ಅಂಕ ಗಳಿಸಿ ಆರನೇ ಸ್ಥಾನ ಪಡೆದುಕೊಂಡಿದೆ.

ದೊಡ್ಡ ರಾಜ್ಯಗಳ ಪೈಕಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ಮೂರು ವಿಧದ ನ್ಯಾಯ ವಿತರಣೆಯಲ್ಲಿ ಕ್ರಮವಾಗಿ 16, 17 ಮತ್ತು 18 ನೇ ಸ್ಥಾನಗಳನ್ನು ಪಡೆದುಕೊಂಡಿವೆ.

10 ಸಣ್ಣ ರಾಜ್ಯಗಳ ಪೈಕಿ ಸಿಕ್ಕಿಂ 0.5715 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳನ್ನು ಪಡೆದುಕೊಂಡಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top